ನವದೆಹಲಿ: ಘಾಜಿಯಾಬಾದ್, ಮೀರತ್, ಮಥುರಾ ಮತ್ತು ಪಶ್ಚಿಮ ಉತ್ತರಪ್ರದೇಶದ ಇತರ ಎರಡು ಕಡೆಗಳಲ್ಲಿ ಐದು ನೂತನ ಆದಾಯ ತೆರಿಗೆ ನ್ಯಾಯಾಲಯ ಸ್ಥಾಪನೆಗೊಳ್ಳಲಿದೆ. ಆದಾಯ ತೆರಿಗೆಗೆ ಸಂಬಂಧಿಸಿದ ಪ್ರಕರಣಗಳು ಇಲ್ಲಿ ಇತ್ಯರ್ಥಗೊಳ್ಳಲಿವೆ.
ಪಶ್ಚಿಮ ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದ ಸುಮಾರು ಸಾವಿರ ಪ್ರಕರಣಗಳು ವಿಚಾರಣೆಗೆ ಕೋರ್ಟಿನಲ್ಲಿ ಬಾಕಿ ಉಳಿದಿವೆ. ಆದಾಯ ತೆರಿಗೆಗೆ ಸಂಬಂಧಿಸಿದ ವಿಚಾರಗಳನ್ನು ಕೈಗೆತ್ತಿಕೊಳ್ಳುವ ನ್ಯಾಯಾಲಯಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರಣ ಎಂದು ಉತ್ತರಪ್ರದೇಶ ಮತ್ತು ಉತ್ತರಾಖಂಡದ ಆದಾಯ ತೆರಿಗೆಯ ಮುಖ್ಯ ಆಯುಕ್ತ ಪಿಕೆ ಗುಪ್ತಾ ಹೇಳಿದ್ದಾರೆ.
ಕಳೆದ ತಿಂಗಳು ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿರುವ ಪಿಕೆ ಗುಪ್ತಾ ಅವರು ಐದು ಹೊಸ ಆದಾಯ ತೆರಿಗೆ ನ್ಯಾಯಾಲಯಗಳನ್ನು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದಾರೆ.
ಮುಂದಿನ ತಿಂಗಳು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್ (CBDT) ಯು ಹೊಸ ಐದು ನ್ಯಾಯಾಲಯಗಳ ಸ್ಥಾಪನೆಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಈ ಹೊಸ ನ್ಯಾಯಾಲಯಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಆದಾಯ ತೆರಿಗೆಗೆ ಸಂಬಂಧಿಸಿದ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.