ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಬಿಜೆಪಿಯ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, “ಗೌರವಾನ್ವಿತ ಅಡ್ವಾಣಿ ಅವರನ್ನು ಭೇಟಿಯಾದೆ. ಅವರಂತಹ ಶ್ರೇಷ್ಠ ವ್ಯಕ್ತಿಗಳು ದಶಕಗಳಿಂದ ಪಕ್ಷವನ್ನು ನಿರ್ಮಾಣ ಮಾಡುತ್ತಾ ಬಂದಿರುವುದರಿಂದ ಮತ್ತು ಜನರಿಗೆ ಸಿದ್ಧಾಂತಗಳ ಬಗ್ಗೆ ತಿಳಿಸುತ್ತಾ ಬಂದಿರುವುದರಿಂದ ಬಿಜೆಪಿಗೆ ಇಂದಿನ ಯಶಸ್ಸು ಲಭಿಸಿದೆ” ಎಂದಿದ್ದಾರೆ.
Called on respected Advani Ji. The BJP’s successes today are possible because greats like him spent decades building the party and providing a fresh ideological narrative to the people. pic.twitter.com/liXK8cfsrI
— Narendra Modi (@narendramodi) May 24, 2019
ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾದ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ “ಡಾಕ್ಟರ್ ಮುರಳಿ ಮನೋಹರ ಜೋಶಿ ಅವರು ಅದ್ಭುತ ಕೌಶಲ್ಯವುಳ್ಳ ಪಂಡಿತ ಮತ್ತು ಬುದ್ಧಿಜೀವಿಯಾಗಿದ್ದಾರೆ. ಭಾರತದ ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಅವರ ಕೊಡುಗೆ ಮಹತ್ತರವಾದುದು. ಬಿಜೆಪಿಯನ್ನು ಬಲಿಷ್ಠ ಗೊಳಿಸಲು ಅವರು ಸದಾ ಶ್ರಮವಹಿಸಿದ್ದಾರೆ ಮತ್ತು ನನ್ನನ್ನೂ ಸೇರಿದಂತೆ ಹಲವಾರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದಿದ್ದಾರೆ.
Dr. Murli Manohar Joshi is a scholar and intellectual par excellence. His contribution towards improving Indian education is remarkable. He has always worked to strengthen the BJP and mentor several Karyakartas, including me.
Met him this morning and sought his blessings. pic.twitter.com/gppfDt7KiB
— Narendra Modi (@narendramodi) May 24, 2019
ಮೊದಲು ಎಲ್ ಕೆ ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಮೋದಿ ಮತ್ತು ಅಮಿತ್ ಶಾ ಬಳಿಕ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾದರು. ಭೇಟಿಯ ಫೋಟೋಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.