ನವದೆಹಲಿ: ಬಿಜೆಪಿಯ ನಾಲ್ಕು ಆಪಾದಿತ ನಾಯಕರುಗಳ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿ ಸೋಮವಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ಎಎಪಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ನಕಲಿ ಸರ್ಟಿಫಿಕೇಟ್ ಆರೋಪ ಎದುರಿಸುತ್ತಿರುವ ಸಚಿವೆ ಸ್ಮೃತಿ ಇರಾನಿಯವರ ರಾಜೀನಾಮೆಯನ್ನು ತಕ್ಷಣ ಪಡೆಯಬೇಕು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಎಎಪಿ ಕಾರ್ಯಕರ್ತರು ಸಂಸತ್ತು ರಸ್ತೆಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿದ್ದು, ಪೊಲೀಸರ ಮತ್ತು ಕಾರ್ಯಕರ್ತರ ನಡುವೆ ಜಟಾಪಟಿ ಏರ್ಪಟ್ಟಿದೆ.
ಚಿಕ್ಕಿ ಹಗರಣದಲ್ಲಿ ಸಿಲುಕಿರುವ ಮಹಾರಾಷ್ಟ್ರದ ಸಚಿವೆ ಪಂಕಜಾ ಮುಂಡೆ ಅವರೂ ರಾಜೀನಾಮೆ ನೀಡಬೇಕು ಎಂದು ಎಎಪಿ ಮಹಿಳಾ ಘಟಕ ಆಗ್ರಹಿಸಿದೆ.
ಅಲ್ಲದೇ ಪ್ರಧಾನಿ ಈ ಆರೋಪಗಳ ಬಗ್ಗೆ ಮೌನ ವಹಿಸಿರುವುದಕ್ಕೆ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.