ನವದೆಹಲಿ: ನರೇಂದ್ರ ಮೋದಿಯವರು ಎರಡನೆಯ ಅವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಗುರುವಾರ ಸಂಜೆ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ಕೇಂದ್ರ ಸಂಪುಟದ ಕೆಲವೊಂದು ಸದಸ್ಯರುಗಳು ಕೂಡ ಅಂದೇ ಸಚಿವರುಗಳಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
“2019ರ ಮೇ 30 ರಂದು ಸಂಜೆ 7 ಗಂಟೆಗೆ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸಮಾರಂಭವನ್ನು ಮುನ್ನಡೆಸಲಿದ್ದಾರೆ ಮತ್ತು ಪ್ರಧಾನಮಂತ್ರಿಗಳಿಗೆ ಮತ್ತು ಸಂಪುಟ ಸದಸ್ಯರಿಗೆ ಗೌಪ್ಯ ಪ್ರಮಾಣವನ್ನು ಬೋಧಿಸಲಿದ್ದಾರೆ” ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಮೋದಿಯವರೊಂದಿಗೆ ಯಾರೆಲ್ಲಾ ಸಚಿವರುಗಳಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಾರೆ ಎಂಬುದು ಇದುವರೆಗೆ ತಿಳಿದು ಬಂದಿಲ್ಲ.
ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನರೇಂದ್ರ ಮೋದಿಯವರನ್ನು ಮುಂದಿನ ಪ್ರಧಾನಿ ಎಂದು ಘೋಷಣೆ ಮಾಡಿದ್ದು, ಹೊಸ ಸರ್ಕಾರವನ್ನು ರಚನೆ ಮಾಡುವುದಕ್ಕೆ ಅವರಿಗೆ ಸೂಚನೆ ನೀಡಿದ್ದಾರೆ.
“ಮುಂದಿನ ಐದು ವರ್ಷಗಳ ಕಾಲ ಪ್ರತಿ ಭಾರತೀಯರು ಬಲಿಷ್ಠ ಭಾರತವನ್ನು ನಿರ್ಮಾಣ ಮಾಡುವ ವಚನವನ್ನು ನೀಡಲಿದ್ದಾರೆ. ಇದಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿದ್ದಂತಹ ಉತ್ಸಾಹಗಳು ಬೇಕು, 2020ರ ವೇಳೆಗೆ, ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳನ್ನು ಪೂರೈಸುವ ವೇಳೆಗೆ ಭಾರತವನ್ನು ಬಲಿಷ್ಠಗೊಳಿಸೋಣ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.