ಅನಂತ್ನಾಗ್ : ದಕ್ಷಿಣ ಕಾಶ್ಮೀರದ ಅನಂತ್ನಾಗ್ನ ಖುಂಡ್ರು ಸಮೀಪದ ಖಝ್ವಾನ್ ಅರಣ್ಯದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. ಇದುವರೆಗೆ ಮೃತ ದೇಹಗಳನ್ನು ಇನ್ನೂ ವಶಕ್ಕೆ ಪಡೆದುಕೊಳ್ಳಲಾಗಿಲ್ಲ. ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅವಿತುಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
“ಅನಂತನಾಗ್ ಜಿಲ್ಲೆಯ ಖಝ್ವಾನ್ ಅರಣ್ಯದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈಗಲೂ ಗುಂಡಿನ ಚಕಮಕಿ ಮುಂದುವರೆದಿದೆ. ಹೆಚ್ಚುವರಿ ಪಡೆಗಳು ಸ್ಥಳಕ್ಕೆ ರವಾನಿಸಲಾಗಿದ್ದು, ಶೋಧ ಕಾರ್ಯವನ್ನು ಬಲಪಡಿಸಲಾಗಿದೆ, ಈ ಮೂಲಕ ಉಗ್ರರು ತಪ್ಪಿಸಿಕೊಳ್ಳುವುದನ್ನು ತಡೆಯಲಾಗಿದೆ.
ಕುಪ್ವಾರ ಜಿಲ್ಲೆಯ ಬಾಬಾಗುಂಡ್ ಪ್ರದೇಶದಲ್ಲಿ 39 ವರ್ಷದ ವ್ಯಕ್ತಿಯೊಬ್ಬರನ್ನು ಸೋಮವಾರ ಸಂಜೆ ಉಗ್ರರು ಹತ್ಯೆ ಮಾಡಿದ ಗಂಟೆಗಳ ಬಳಿಕ ಎನ್ಕೌಂಟರ್ ಅನ್ನು ಆರಂಭಿಸಲಾಗಿದೆ. ಅದಕ್ಕೂ ಮುನ್ನ ಮೋಸ್ಟ್ ವಾಂಟೆಂಡ್ ಉಗ್ರ ಝಾಕಿರ್ ಮೂಸಾನನ್ನು ಪುಲ್ವಾಮದ ಟ್ರಾಲ್ನಲ್ಲಿ ಹತ್ಯೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.