ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇದುವರೆಗಿನ ಅತಿ ದೊಡ್ಡ ಸಮಾರಂಭ ಇಂದು ಜರುಗಲಿದೆ. ಅದುವೇ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭ. ವಿದೇಶಿ ಗಣ್ಯರು, ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರುಗಳು ಸೇರಿದಂತೆ ಸುಮಾರು 8,000 ಅತಿಥಿಗಳು ಈ ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ .
ದೆಹಲಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಪಡೆಗಳ ಸುಮಾರು 10 ಸಾವಿರ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಪುಟ ಸಚಿವರುಗಳ ಪ್ರಮಾಣವಚನ ಸ್ವೀಕಾರ ಸಮಾರಂಭವು ದೆಹಲಿಯಲ್ಲಿನ ರಾಷ್ಟ್ರಪತಿ ಭವನದಲ್ಲಿ ಗುರುವಾರ ಸಂಜೆ 7 ಗಂಟೆಗೆ ಜರುಗಲಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಪಡೆಗಳ ಸುಮಾರು 10 ಸಾವಿರ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದಿದ್ದಾರೆ.
ಹಲವಾರು ಸೂಕ್ಷ್ಮ ಸ್ಥಳಗಳಲ್ಲಿ ತುರ್ತು ಸ್ಪಂದನ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ. ಮೋದಿ ಅವರು ರಾಜಘಾಟ್, ಸದೈವ ಅಟಲ್ ಸಮಾಧಿ, ನ್ಯಾಷನಲ್ ಮೆಮೋರಿಯಲ್ಗೆ ತೆರಳಿದ ಹಿನ್ನೆಲೆಯಲ್ಲಿ ವಿವಿಧ ಕಟ್ಟಡಗಳಲ್ಲಿ ಸ್ನಿಫರ್ಸ್ಗಳನ್ನು ನಿಯೋಜನೆಗೊಳಿಸಲಾಗಿತ್ತು. ಮೋದಿ ಮತ್ತು ಇತರ ವಿದೇಶಿ ಗಣ್ಯರು ಪ್ರಯಾಣಿಸುವ ಮಾರ್ಗದಲ್ಲಿ ಸುಮಾರು ಎರಡು ಸಾವಿರ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗುವ ಅತಿಥಿಗಳಿಗೆ ಸಮೋಸ, ಪನ್ನೀರ್ನಿಂದ ತಯಾರಿಸಿದ ಸಿಹಿತಿಂಡಿಗಳು ಇರಲಿವೆ . ಗಣ್ಯರುಗಳಿಗೆ ರಾಷ್ಟ್ರಪತಿ ಆಯೋಜನೆಗೊಳಿಸುವ ಔತಣಕೂಟದಲ್ಲಿ ದಾಲ್ ರೈಸೀನಾ ಮುಂತಾದ ವಿಶೇಷ ತಿಂಡಿ-ತಿನಿಸುಗಳು ಇರಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.