ವಿಜಯವಾಡ : ವೈಎಸ್ಆರ್ ಕಾಂಗ್ರೇಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ವಿಜಯವಾಡದ ಇಂದಿರಾಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ಏರ್ಪಟ್ಟಿತ್ತು.
ವೈಎಸ್ಆರ್ ಕಾಂಗ್ರೇಸ್ ಪಕ್ಷವು ಇತ್ತೀಚಿಗೆ ನಡೆದ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ 175 ಸ್ಥಾನಗಳ ಪೈಕಿ 151 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ದಿಗ್ವಿಜಯವನ್ನು ಸಾಧಿಸಿತ್ತು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜಗನ್ ರೆಡ್ಡಿ ಅವರ ತಾಯಿ ವಿಜಯಲಕ್ಷ್ಮೀ, ಪತ್ನಿ ಭಾರತಿ, ಸಹೋದರಿ ಶರ್ಮಿಳಾ ಹಾಗೂ ಮಕ್ಕಳಾದ ಹರ್ಷ ರೆಡ್ಡಿ ಮತ್ತು ವರ್ಷ ರೆಡ್ಡಿ, ಗಣ್ಯರು ಸೇರಿದಂತೆ 20 ಸಾವಿರ ಭಾಗಿಯಾಗಿದ್ದರು.
ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪುದುಚೇರಿ ಮುಖ್ಯಮಂತ್ರಿ ಮಲ್ಲಾಡಿ ಕೃಷ್ಣರಾವ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಆಹ್ವಾನ ನೀಡಿದರೂ ಸಮಾರಂಭದಲ್ಲಿ ಭಾಗಿಯಾಗಿಲ್ಲ, ಪ್ರತಿನಿಧಿಯನ್ನು ಕಳುಹಿಸಿಕೊಟ್ಟಿದ್ದರು.
YS Jagan Mohan Reddy sworn-in as the Chief Minister of Andhra Pradesh, in Vijayawada. pic.twitter.com/WeUouHNT8P
— ANI (@ANI) May 30, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.