ನವದೆಹಲಿ: ನರೇಂದ್ರ ಮೋದಿಯವರು ಸರ್ಕಾರದಲ್ಲಿ ಐದು ವರ್ಷಗಳ ಕಾಲ ವಿದೇಶಾಂಗ ಸಚಿವೆಯಾಗಿ ಅತ್ಯದ್ಭುತವಾದ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಈ ಬಾರಿಯ ಮೋದಿ ಸರ್ಕಾರದ ಸಂಪುಟದಿಂದ ದೂರ ಉಳಿದಿದ್ದಾರೆ.
ಈ ಬಗ್ಗೆ ಮೋದಿಯವರಿಗೆ ಭಾವನಾತ್ಮಕವಾಗಿ ಟ್ವಿಟ್ ಮಾಡಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. “ಪ್ರಧಾನ ಮಂತ್ರಿಯವರೇ, ಐದು ವರ್ಷಗಳ ಕಾಲ ನೀವು ವಿದೇಶಾಂಗ ಸಚಿವೆಯಾಗಿ ಭಾರತೀಯರ ಮತ್ತು ಅನಿವಾಸಿ ಭಾರತೀಯರ ಸೇವೆಯನ್ನು ಮಾಡುವ ಅವಕಾಶವನ್ನು ನನಗೆ ಕರುಣಿಸಿದ್ದೀರಿ ಮತ್ತು ಕಾರ್ಯಾಲಯದಲ್ಲಿ ವೈಯಕ್ತಿವಾಗಿಯೂ ನನಗೆ ಸಾಕಷ್ಟು ಗೌರವ ಪ್ರಾಪ್ತವಾಗುವಂತೆ ಮಾಡಿದ್ದೀರಿ. ಇದಕ್ಕಾಗಿ ನಿಮಗೆ ನಾನು ಅಭಾರಿಯಾಗಿದ್ದೇನೆ. ನಮ್ಮ ಸರ್ಕಾರ ಅತ್ಯಂತ ಯಶಸ್ವಿಯಾಗಿ ಮುನ್ನಡೆಯಲಿ ಎಂಬುದೇ ದೇವರಲ್ಲಿ ನನ್ನ ಪ್ರಾರ್ಥನೆ” ಎಂದಿದ್ದಾರೆ.
प्रधान मंत्री जी – आपने 5 वर्षों तक मुझे विदेश मंत्री के तौर पर देशवासियों और प्रवासी भारतीयों की सेवा करने का मौका दिया और पूरे कार्यकाल में व्यक्तिगत तौर पर भी बहुत सम्मान दिया. मैं आपके प्रति बहुत आभारी हूँ. हमारी सरकार बहुत यशस्विता से चले, प्रभु से मेरी यही प्रार्थना है.
— Sushma Swaraj (@SushmaSwaraj) May 30, 2019
ಸುಷ್ಮಾ ಸ್ವರಾಜ್ ಅವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳದೇ ಇದ್ದುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಅನಾರೋಗ್ಯದ ನಿಮಿತ್ತ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ವಿದೇಶಾಂಗ ಸಚಿವೆಯಾಗಿ ಸುಷ್ಮಾ ಅವರು ಎಲ್ಲರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಟ್ವಿಟರ್ ಮೂಲಕವೇ ಹಲವಾರು ಸಮಸ್ಯೆಗಳನ್ನು ಪರಿಹರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.