ನವದೆಹಲಿ: ನರೇಂದ್ರ ಮೋದಿಯವರು ಎರಡನೇಯ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಿದ್ದಂತೆ, ಯೋಗ ಗುರು ರಾಮ್ದೇವ್ ಬಾಬಾ ಅವರು ಪ್ರತಿಪಕ್ಷಗಳಿಗೆ ಒತ್ತಡ ನಿವಾರಣೆಯ ಪಾಠ ಹೇಳಿಕೊಟ್ಟಿದ್ದಾರೆ. ಮುಂದಿನ 10 ರಿಂದ 15 ವರ್ಷಗಳ ಕಾಲ ಪ್ರತಿಪಕ್ಷ ಸದಸ್ಯರು ‘ಕಪಾಲಭಾತಿ” ಯೋಗವನ್ನು ಮಾಡಬೇಕು ಎಂದು ಅವರು ಸಲಹೆಯನ್ನು ನೀಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯ ನೇತೃತ್ವದಲ್ಲಿ ದೇಶವು ಆರ್ಥಿಕ, ಪರಿಕಲ್ಪನೆ ಮತ್ತು ಸಾಂಸ್ಕೃತಿಕ ದೌರ್ಜನ್ಯದಿಂದ ಸ್ವಾತಂತ್ರ್ಯ ಪಡೆಯಲಿದೆ. ಅಮಿತ್ ಶಾ, ಪಿಯೂಷ್ ಗೋಯಲ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಎಲ್ಲ ಸಚಿವರುಗಳು ಜನರ ನಿರೀಕ್ಷೆಯ ಮಟ್ಟವನ್ನು ತಲುಪುತ್ತಾರೆ. ಮುಂದಿನ ಐದು ವರ್ಷಗಳ ಕಾಲ ಅವರು ಕಷ್ಟಪಟ್ಟು ಕೆಲಸ ಮಾಡುತ್ತಾರೆ” ಎಂದು ರಾಮ್ದೇವ ಎಎನ್ಐಗೆ ತಿಳಿಸಿದ್ದಾರೆ.
“ನನಗನಿಸುತ್ತದೆ ಮುಂದಿನ 10ರಿಂದ 15 ವರ್ಷಗಳ ಕಾಲ ಪ್ರತಿಪಕ್ಷ ನಾಯಕರುಗಳು ಸಾಕಷ್ಟು “ಕಪಾಲಭಾತಿ” ಮತ್ತು “ಅನುಲೋಮ ವಿಲೋಮ”ಗಳನ್ನು ಮಾಡಬೇಕೆಂದು, ಆಗ ಮಾತ್ರ ಅವರಿಗೆ ತಮ್ಮ ಒತ್ತಡವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ” ಎಂದಿದ್ದಾರೆ.
ಬಾಬಾ ಅವರು ಬಿಜೆಪಿಯ ಕಟ್ಟಾ ಬೆಂಬಲಿಗನಾಗಿದ್ದು, ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ನಿಲುವುಗಳನ್ನು ವಿರೋಧಿಸುತ್ತಲೇ ಬಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.