ನವದೆಹಲಿ: ಕೊಟ್ಟ ಭರವಸೆಯಂತೆ ಪ್ರಧಾನಿ ನರೇಂದ್ರ ಮೋದಿ ಜಲ ಶಕ್ತಿ ಖಾತೆಯನ್ನು ರಚನೆ ಮಾಡಿದ್ದಾರೆ. ದೇಶದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲ ಶಕ್ತಿ ಖಾತೆಯನ್ನು ರಚನೆ ಮಾಡುತ್ತೇನೆ ಎಂದು ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಅದರಂತೆ ಅವರಿಂದು ನೂತನ ಖಾತೆಯನ್ನು ರಚನೆ ಮಾಡಿದ್ದಾರೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರನನ್ನು ಜೋಧಪುರ ಲೋಕಸಭಾ ಕ್ಷೇತ್ರದಲ್ಲಿ ಪರಾಭವಗೊಳಿಸಿರುವ ಗಜೇಂದ್ರ ಸಿಂಗ್ ಶೇಖಾವತ್ ಅವರು ಜಲಶಕ್ತಿ ಸಚಿವಾಲಯದ ಸಚಿವರಾಗಿದ್ದಾರೆ.
ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ ಅವರು, ದೇಶದ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಜಲಶಕ್ತಿ ಸಚಿವಾಲಯ ಸ್ಥಾಪನೆ ಮಾಡುತ್ತೇನೆ ಎಂದಿದ್ದರು. ಬಿಜೆಪಿ ಪ್ರಣಾಳಿಕೆಯಲ್ಲೂ ಈ ಬಗ್ಗೆ ಭರವಸೆಯನ್ನು ನೀಡಲಾಗಿತ್ತು.
ದೇಶದ ಹಲವಾರು ರಾಜ್ಯಗಳು ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ. ಇಂತಹ ರಾಜ್ಯಗಳ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ, ಅಂತರ್ಜಲವನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಜಲಶಕ್ತಿ ಸಚಿವಾಲಯ ಕಾರ್ಯ ನಿರ್ವಹಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.