ನವದೆಹಲಿ: ರಕ್ಷಣಾ ಸಚಿವಾಲಯದಡಿ ಬರುವ ಎಲ್ಲಾ ವಿಭಾಗಗಳ ಮತ್ತು ಇಲಾಖೆಗಳ ವಿಸ್ತೃತವಾದ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸುವಂತೆ ನೂತನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಮ್ಮ ಅಧಿಕಾರಿಗಳಿಗೆ ಶನಿವಾರ ಸೂಚಿಸಿದ್ದಾರೆ. ಅಂದುಕೊಂಡ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಸಮಯ ನಿಗದಿತ ಟಾರ್ಗೆಟ್ ರೂಪಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.
ಸೌತ್ ಬ್ಲಾಕ್ನಲ್ಲಿರುವ ರಕ್ಷಣಾ ಸಚಿವಾಲಯದ ಕಛೇರಿಯಲ್ಲಿ ಇಂದು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ, ನೌಕಾ ಮುಖ್ಯಸ್ಥ ಕರಂಬೀರ್ ಸಿಂಗ್ ಅವರೊಂದಿಗೆ ರಾಜನಾಥ್ ಸಿಂಗ್ ಸಭೆ ನಡೆಸಿದರು. ಪ್ರಮಾಣವಚನ ಸ್ವೀಕಾರ ಮಾಡಿದ ಎರಡು ದಿನಗಳ ಬಳಿಕ ಅವರು ರಕ್ಷಣಾ ಖಾತೆಯ ಜವಾಬ್ದಾರಿಯನ್ನು ಇಂದು ವಹಿಸಿಕೊಂಡರು.
ನರೇಂದ್ರ ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಅವರು ಗೃಹ ಖಾತೆಯನ್ನು ನಿರ್ವಹಣೆ ಮಾಡಿದ್ದರು. ಎರಡನೇಯ ಅವಧಿಯಲ್ಲಿ ರಕ್ಷಣಾ ಖಾತೆ ನಿರ್ವಹಣೆ ಮಾಡುತ್ತಿದ್ದಾರೆ. ಗೃಹ ಖಾತೆ ಅಮಿತ್ ಶಾ ಅವರಿಗೆ ದೊರೆತಿದೆ.
ಅಧಿಕೃತವಾಗಿ ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮರಾದ ಯೋಧರಿಗೆ ಗೌರವ ನಮನಗಳನ್ನು ಸಲ್ಲಿಕೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.