ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡಿರುವ ಡಾ. ಹರ್ಷವರ್ಧನ್ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿನ ತಮ್ಮ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಛೇರಿಗೆ ಸೈಕಲ್ ಮೂಲಕ ಆಗಮಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಆರೋಗ್ಯ ಸಚಿವರಾಗಿ ಇಂದು ಅವರು ಅಧಿಕೃತವಾಗಿ ಅಧಿಕಾರವನ್ನು ಸ್ವೀಕರಿಸಿದರು.
ಸೈಕ್ಲಿಂಗ್ ಒಂದು ಸರಳ, ಉತ್ತಮ, ವಿಶ್ವಾಸಾರ್ಹ, ಸ್ವಚ್ಛ ಮತ್ತು ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿದೆ. ಜೂನ್ 3 ಜಾಗತಿಕ ಬೈಸಿಕಲ್ ಡೇ. ಸುಸ್ಥಿರ ಅಭಿವೃದ್ಧಿ ಗುರಿಯನ್ನು ಸಾಧಿಸಲು ಸೈಕ್ಲಿಂಗ್ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಇಂದು ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ್ದೇನೆ. ನನ್ನ ಮೇಲೆ ಭರವಸೆ ಇಟ್ಟ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ದೇಶದ ಜನರ ಆರೋಗ್ಯ ಮೋದಿ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಸಚಿವನಾಗಿ ನನ್ನ ಜವಾಬ್ದಾರಿಯನ್ನು ಪೂರೈಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ” ಎಂದಿದ್ದಾರೆ.
ಡಾ. ಹರ್ಷವರ್ಧನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಮತ್ತು ಭೂ ವಿಜ್ಞಾನ ಸಚಿವರಾಗಿ ನೇಮಕಗೊಂಡಿದ್ದಾರೆ. ನರೇಂದ್ರ ಮೋದಿಯವರ ಮೊದಲ ಅವಧಿಯ ಸರಕಾರದಲ್ಲೂ ಅವರು ಈ ಸಚಿವಾಲಯಗಳನ್ನು ನಿಭಾಯಿಸಿದ್ದಾರೆ.
ಜೂನ್ 3 ನ್ನು ವಿಶ್ವ ಬೈಸಿಕಲ್ ದಿನವಾಗಿ ವಿಶ್ವಸಂಸ್ಥೆ ಸಾಮಾನ್ಯ ಸಭೆ ಘೋಷಣೆ ಮಾಡಿದೆ.
GreenGoodDeed_237#Cycling is a simple,affordable, reliable,clean & environmentally sustainable means of transport.#UNGA has declared June 3 as #WorldBicycleDay to underline contribution of cycling to sustainable development goals. It’s my fav sport too 2 #BeatAirPollution @UN pic.twitter.com/eVYcRJLBva
— Dr Harsh Vardhan (@drharshvardhan) June 3, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.