ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಯೋಗದ ವಿವಿಧ ಆಸನಗಳ ಬಗ್ಗೆ ಮಾಹಿತಿಯನ್ನು ನೀಡುವ ವೀಡಿಯೋವನ್ನು ಆಗಾಗ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೂಡ ಅವರು ತ್ರಿಕೋನಾಸನದ ಭಂಗಿಯ ಮಾಹಿತಿಯ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಯೋಗವನ್ನು ಜೀವನದ ಅವಿಭಾಜ್ಯ ಭಾಗವನ್ನಾಗಿ ಮಾಡಿ ಮತ್ತು ಇತರರಿಗೂ ಯೋಗ ಮಾಡುವಂತೆ ಪ್ರೇರಣೆ ನೀಡಿ ಎಂದು ಜನತೆಗೆ ಈ ವೀಡಿಯೋ ಮೂಲಕ ಪ್ರಧಾನಿ ಕರೆ ನೀಡಿದ್ದಾರೆ.
ಮೋದಿಯವರು ಹಂಚಿಕೊಂಡಿರುವ ವೀಡಿಯೋದಲ್ಲಿ ಆ್ಯನಿಮೇಶನ್ ಬಳಸಿ ಅವರು ತ್ರಿಕೋನಾಸನ ಮಾಡುತ್ತಿರುವ ದೃಶ್ಯವಿದೆ.
2015 ರಿಂದ ಜೂನ್ 21 ಅನ್ನು ವಿಶ್ವ ಯೋಗ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರಸ್ತಾಪವನ್ನು ಪುರಸ್ಕರಿಸಿ ವಿಶ್ವಸಂಸ್ಥೆ ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಆಚರಿಸುತ್ತಿದೆ.
On 21st June, we will mark #YogaDay2019.
I urge you all to make Yoga an integral part of your life and also inspire others to do the same.
The benefits of Yoga are tremendous.
Here is a video on Trikonasana. pic.twitter.com/YDB6T3rw1d
— Narendra Modi (@narendramodi) June 5, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.