ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಗಳು ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಜವಾಬ್ದಾರಿಯೂ ಅವರ ಮೇಲಿದೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯವು ಗ್ರಾಮೀಣ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಉದ್ಯೋಗವನ್ನು ಸೃಷ್ಟಿಸಲು ಸೂಕ್ಷ್ಮ ಘಟಕ ಮತ್ತು ಗ್ರಾಮ ಕೈಗಾರಿಕೆಗಳನ್ನು ಬೆಂಬಲಿಸುವತ್ತ ಹೆಚ್ಚು ಗಮನ ಹರಿಸಲಿದೆ ಎಂದು ಗಡ್ಕರಿ ಹೇಳಿದ್ದಾರೆ.
“ಇದು ಅತ್ಯಂತ ಪ್ರಮುಖ ಖಾತೆ ಮತ್ತು ದೇಶದ ಪ್ರಗತಿ ದರ ಮತ್ತು ಉದ್ಯೋಗ ಸಂಭಾವ್ಯತೆಯಂತಹ ಮಹತ್ವದ ವಿಷಯಗಳೊಂದಿಗೆ ಬೆಸೆದುಕೊಂಡಿದೆ. ದೇಶದ ಪ್ರಗತಿ ದರವನ್ನು ಉತ್ತೇಜಿಸುವುದು ನಮ್ಮ ಪ್ರಮುಖ ಆದ್ಯತೆ. ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಯತ್ತ ಗಮನ ಕೇಂದ್ರೀಕರಿಸುವ ಮೂಲಕ ಗ್ರಾಮೀಣ ಮತ್ತು ಕೃಷಿ ಆರ್ಥಿಕತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತೇವೆ. ಕೃಷಿ ತ್ಯಾಜ್ಯಗಳನ್ನು ಬಳಸಿಕೊಂಡು ಸಣ್ಣ ಘಟಕಗಳು ವಿವಿಧ ವಸ್ತುಗಳನ್ನು ಉತ್ಪಾದಿಸುವಂತೆ ಮಾಡುತ್ತೇವೆ” ಎಂದಿದ್ದಾರೆ.
ಪ್ರಸ್ತುತ ಈ ವಲಯದಲ್ಲಿ ಉದ್ಯೋಗ ಸೃಷ್ಟಿ ಅತ್ಯಂತ ಕಡಿಮೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಹೆಚ್ಚುವತ್ತ ಹೆಚ್ಚಿನ ನಿರೀಕ್ಷೆ ಹೊಂದಿದ್ದಾರೆ ಎಂದರು.
ಭಾರತದ ರಫ್ತನ್ನು ತಗ್ಗಿಸಿ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೂಲಕ ಉತ್ಪಾದನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಳ್ಳುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.