ನವದೆಹಲಿ: ತೆರಿಗೆದಾರರಿಗೆ ತೆರಿಗೆಯನ್ನು ಸರಿಯಾದ ಸಮಯದಲ್ಲಿ ಪಾವತಿಸುವಂತೆ ಪ್ರೇರೇಪಿಸುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲು ಮುಂದಾಗಿದೆ, ಇದರನ್ವಯ ತೆರಿಗೆದಾರರಿಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೂತು ಚಹಾ ಕುಡಿಯುವ ಅವಕಾಶ ಸಿಗಲಿದೆ.
ಝೀ ಬ್ಯುಸಿನೆಸ್ ವರದಿಯ ಪ್ರಕಾರ, ತೆರಿಗೆದಾರರಿಗೆ ತೆರಿಗೆ ಪಾವತಿಸಲು ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಜೂನ್ 17 ರಿಂದ ಆರಂಭಗೊಳ್ಳಲಿರುವ ಸಂಸತ್ತಿನ ಅಧಿವೇಶನದ ಸಂದರ್ಭದಲ್ಲಿ ಸರ್ಕಾರ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ಹೊಸ ಕಾರ್ಯಕ್ರಮದ ಅನ್ವಯ, ಅತೀ ಹೆಚ್ಚು ತೆರಿಗೆಯನ್ನು ಪಾವತಿ ಮಾಡಿದವರು ಪ್ರಧಾನಿ ನರೇಂದ್ರ ಮೋದಿ ಅಥವಾ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚಹಾ ಸವಿಯುವ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ.
ಈ ಕಾರ್ಯಕ್ರಮದ ಮೂಲಕ ತೆರಿಗೆದಾರರನ್ನು ಪ್ರೋತ್ಸಾಹಿಸಿ ತೆರಿಗೆ ಸಂಗ್ರಹವನ್ನು ಹೆಚ್ಚಳಗೊಳಿಸುವ ಆಶಯ ಸರ್ಕಾರದ್ದಾಗಿದೆ.
ಪ್ರಸ್ತುತ ಸರ್ಕಾರವು ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿ ಮಾಡುವವರಿಗೆ “ಅಪ್ರಿಸಿಯೇಶನ್ ಸರ್ಟಿಫಿಕೇಶನ್” ಮುಂತಾದ ನಾನ್ ಮಾನಿಟರಿ ಇನ್ಸೆಂಟಿವ್ ಗಳನ್ನು ನೀಡುತ್ತಿದೆ, ಆದರೆ ಪ್ರಧಾನಿಯೊಂದಿಗೆ ಚಹಾ ಸವಿಯುವ ಅವಕಾಶ ನೀಡುತ್ತಿರುವುದು ನವೀನ ಕಾರ್ಯಕ್ರಮ ಎನಿಸಿಕೊಂಡಿದೆ.
20114ರಲ್ಲಿ ಪ್ರಧಾನಿ ಮೋದಿಯವರ “ಚಾಯ್ ಪೇ ಚರ್ಚಾ’ ಅತ್ಯಂತ ಯಶಸ್ವಿ ಚುನಾವಣಾ ಪ್ರಚಾರ ಅಭಿಯಾನವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.