ಪಣಜಿ: ಪ್ರತಿಭಟನಾ ನಿರತ ನರ್ಸ್ಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹಾರ ಮಾಡುವ ಬದಲು ತುಚ್ಛ ಹೇಳಿಕೆಯೊಂದನ್ನು ನೀಡಿ ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಎಲ್ಲರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
‘ಹೆಣ್ಣುಮಕ್ಕಳು ಬಿಸಿಲಲ್ಲಿ ಕೂರು ಉಪವಾಸ ಸತ್ಯಾಗ್ರಹ ಮಾಡಬಾರದು, ಇದರಿಂದ ಅವರ ಕಾಂತಿ ಹಾಳಾಗಿ ಅವರು ಕಪ್ಪಾಗುತ್ತಾರೆ. ಇದರಿಂದಾಗಿ ಅವರಿಗೆ ಮದುವೆಯಾಗಲು ವರ ಸಿಗುವುದಿಲ್ಲ’ ಎಂದು ಪ್ರತಿಭಟನಾ ನಿರತ ನರ್ಸ್ಗಳಿಗೆ ಸಿಎಂ ಬಿಟ್ಟಿ ಸಲಹೆ ನೀಡಿದ್ದಾರೆ.
ಅವರ ಈ ತುಚ್ಛ ಹೇಳಿಕೆಯ ಬಗ್ಗೆ ದೇಶದಾದ್ಯಂತ ಖಂಡನೆ ವ್ಯಕ್ತವಾಗಿದೆ.
‘ಸಿಎಂ ಅವರಿಂದ ಈ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಅವರು ನಮ್ಮ ಸಮಸ್ಯೆಯನ್ನು ಆಲಿಸುತ್ತಾರೆ ಎಂಬ ನಂಬಿಕೆಯಿತ್ತು. ನಿಜಕ್ಕೂ ನಮಗೆ ಅವರ ವರ್ತನೆಯಿಂದ ಬೇಸರವಾಗಿದೆ’ ಎಂದು ನರ್ಸ್ ಅನುಷಾ ಸಾವಂತ್ ಪ್ರತಿಕ್ರಿಯಿಸಿದ್ದಾರೆ.
ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿ ಗೋವಾದಲ್ಲಿ ನರ್ಸ್ಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.