ನವದೆಹಲಿ: 17ನೇ ಲೋಕಸಭಾದ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸದರಾಗಿ ಪ್ರಮಾಣವಚನವನ್ನು ಇಂದು ಸ್ವೀಕಾರ ಮಾಡುತ್ತಿದ್ದಂತೆ ಇತರ ಸದಸ್ಯರಿಂದ ಕರತಾಡನ ಮತ್ತು ಘೋಷಣೆಗಳ ಸುರಿಮಳೆಯೇ ಸುರಿಯಿತು.
“ನಾನು, ನರೇಂದ್ರ ದಾಮೋದರ್ ದಾಸ್ ಮೋದಿ ಲೋಕಸಭಾ ಸದಸ್ಯನಾಗಿ ನೇಮಕವಾಗಿದ್ದು, ಸಂವಿಧಾನಕ್ಕೆ ಬದ್ಧನಾಗಿ ಕರ್ತವ್ಯ ನಿರ್ವಹಿಸುತ್ತೇನೆ” ಎಂದು ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ‘ಮೋದಿ, ಮೋದಿ’ ಎಂಬ ಉದ್ಘೋಷಗಳು ಮುಗಿಲು ಮುಟ್ಟಿದವು. ಹಂಗಾಮಿ ಸ್ಪೀಕರ್ ವಿರೇಂದ್ರ ಕುಮಾರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಲೋಕಸಭೆಗೆ ಆಯ್ಕೆಯಾದ ನೂತನ ಸಂಸದರು ಇಂದು ಮತ್ತು ನಾಳೆ ಹಂಗಾಮಿ ಸ್ಪೀಕರ್ ಅವರಿಂದ ಪ್ರಮಾಣವಚನವನ್ನು ಸ್ವೀಕರಿಸುತ್ತಾರೆ.
2019ರ ಚುನಾವಣೆಯ ಬಳಿಕ 17ನೇ ಲೋಕಸಭೆ ಅಸ್ತಿತ್ವಕ್ಕೆ ಬಂದಿದ್ದು, ಅದರ ಮೊದಲ ಅಧಿವೇಶನ ಇಂದಿನಿಂದ ನಡೆಯುತ್ತಿದೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸೇರಿದಂತೆ ಹಲವಾರು ಮಂದಿ ಲೋಕಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.