ಅಮೇಥಿ: ಉತ್ತರಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆಯಾದ ಬಳಿಕ ಸ್ಮೃತಿ ಇರಾನಿಯವರು, ಆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಟೊಂಕ ಕಟ್ಟಿ ನಿಂತಿದ್ದಾರೆ. ಅಲ್ಲಿನ ಆರೋಗ್ಯ ಸೇವೆಯನ್ನು ಸುಧಾರಿಸುವತ್ತ ಅವರು ಹೆಚ್ಚಿನ ಗಮನವನ್ನು ನೀಡುತ್ತಿದ್ದಾರೆ. ಅವರ ಮನವಿಯ ಮೇರೆಗೆ ಅಲ್ಲಿನ ರಾಜ್ಯ ಸರ್ಕಾರ ಅಮೇಥಿಗೆ 8 ಹೊಸ ಅಂಬ್ಯುಲೆನ್ಸ್ಗಳನ್ನು ಒದಗಿಸಿದೆ.
ಸ್ಮೃತಿ ಇರಾನಿಯವರ ಮನವಿಯ ಮೇರೆಗೆ ಅಂಬ್ಯುಲೆನ್ಸ್ಗಳನ್ನು ಪೂರೈಕೆ ಮಾಡಲಾಗಿದೆ ಎಂದು ಉತ್ತರಪ್ರದೇಶ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.
“ಸ್ಮೃತಿ ಇರಾನಿಯವರು ಅಮೇಥಿಯ ಸಂಸದರಾಗಿ ಆಯ್ಕೆಯಾದ ಬಳಿಕದಿಂದ ತಮ್ಮ ಕ್ಷೇತ್ರದ ಆರೋಗ್ಯವನ್ನು ಸುಧಾರಿಸಲು ಮತ್ತು ಬಲಿಷ್ಠಗೊಳಿಸಲು ಮನವಿಯನ್ನು ಮಾಡಿಕೊಳ್ಳುತ್ತಲೇ ಇದ್ದಾರೆ. ಈ ಹಿನ್ನಲೆಯಲ್ಲಿ ಅಮೇಥಿಗೆ 8 ಹೊಸ 108 ಅಂಬ್ಯುಲೆನ್ಸ್ಗಳನ್ನು ಪೂರೈಸಿದ್ದೇವೆ, ಇದರಿಂದ ರೋಗಿಗಳ ಕಾಯುವಿಕೆ 15-10 ನಿಮಿಷಗಳ ಕಾಲ ತಗ್ಗಲಿದೆ” ಎಂದು ಉತ್ತರಪ್ರದೇಶದ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.
ಅಮೇಥಿ ಕ್ಷೇತ್ರವನ್ನು ಸುದೀರ್ಘ ಸಮಯದವರೆಗೆ ಪ್ರತಿನಿಧಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಲ್ಲಿನ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಸ್ಮೃತಿ ಆರೋಪಿಸುತ್ತಾ ಬಂದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು ರಾಹುಲ್ ಅವರನ್ನು 55 ಸಾವಿರ ಮತಗಳಿಂದ ಸೋಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.