ನವದೆಹಲಿ: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸಂಸದ ಓಂ ಬಿರ್ಲಾ ಅವರು ನೇಮಕವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಜಸ್ಥಾನದ ಕೋಟಾ-ಬುಂಡಿ ಸಂಸದೀಯ ಕ್ಷೇತ್ರವನ್ನು ಬಿರ್ಲಾ ಅವರು ಗೆದ್ದುಕೊಂಡಿದ್ದಾರೆ. ಇದೀಗ ಇವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸ್ಪೀಕರ್ ಸ್ಥಾನಕ್ಕೆ ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಬಿಜೆಡಿ, ಶಿವಸೇನೆ, ಅಕಾಲಿ ದಳ, ನ್ಯಾಷನಲ್ ಪೀಪಲ್ಸ್ ಪಾರ್ಟಿ, ಮಿಜೋ ನ್ಯಾಷನಲ್ ಫ್ರಾಂಟ್, ಲೋಕ ಜನಶಕ್ತಿ ಪಾರ್ಟಿ, ವೈಎಸ್ ಆರ್ ಸಿಪಿ, ಜೆಡಿಯು, ಎಐಎಡಿಎಂಕೆ, ಅಪ್ನಾ ದಳ್ ಪಕ್ಷಗಳಿಗೆ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಓಂ ಬಿರ್ಲಾ ಅವರ ಅಭ್ಯರ್ಥಿತನವನ್ನು ಬೆಂಬಲಿಸುವಂತೆ ಮನವಿ ಮಾಡಿ ಪತ್ರ ಬರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭಾದಲ್ಲಿ ಎನ್ಡಿಎಗೆ ಸ್ಪಷ್ಟ ಬಹುಮತವಿದೆ. ಬಿಜೆಪಿಯೊಂದೇ 303 ಸ್ಥಾನಗಳನ್ನು ಹೊಂದಿದೆ. ಎನ್ ಡಿಎ ಬಲ 350 ಆಗಿದೆ. ಈ ಕಾರಣದಿಂದಾಗಿ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
56 ವರ್ಷದ ಓಂ ಬಿರ್ಲಾ ಅವರು ಸುದೀರ್ಘ ಸಮಯದಿಂದ ಪಕ್ಷದ ಏಳಿಗೆಗಾಗಿ ದುಡಿಯುತ್ತಿದ್ದಾರೆ ಮತ್ತು 2018ರಲ್ಲಿ ರಾಜಸ್ಥಾನ ಬಿಜೆಪಿಯ ಪುನರ್ ರಚನೆಯಲ್ಲಿ ಕೈಜೋಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.