ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ‘ಒಂದು ದೇಶ, ಒಂದು ಚುನಾವಣೆ’ಯ ಸಾಧ್ಯತೆ ಬಾಧ್ಯತೆಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸಮಿತಿಯನ್ನು ರಚಿಸಲು ನಿರ್ಧರಿಸಿದೆ. ಬುಧವಾರ ಪ್ರಧಾನಿ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸಮಿತಿ ರಚನೆಯ ನಿರ್ಧಾರದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
‘ಒಂದು ದೇಶ, ಒಂದು’ ಚುನಾವಣೆಯ ಬಗ್ಗೆ ನಿರ್ಧರಿಸಲು ಬುಧವಾರ ನಡೆಸಲಾದ ಸಭೆಗೆ ಕಾಂಗ್ರೆಸ್, ಟಿಎಂಸಿ, ಬಿಎಸ್ ಪಿ, ಸಮಾಜವಾದಿ , ಡಿಎಂಕೆ ಪಕ್ಷಗಳು ಗೈರಾಗಿವೆ. ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್, ತೆಲುಗುದೇಶಂ ಪಕ್ಷದ ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರು ಪ್ರತಿನಿಧಿಗಳನ್ನು ಕಳುಹಿಸಿಕೊಟ್ಟಿದ್ದರು.
ಸಭೆಯ ಬಳಿಕ ಮಾತನಾಡಿದ ರಾಜನಾಥ್ ಸಿಂಗ್ ಅವರು, “ಒಂದು ದೇಶ, ಒಂದು ಚುನಾವಣೆಯ ವಿಷಯದ ಬಗ್ಗೆ ಎಲ್ಲಾ ಆಯಾಮದಲ್ಲೂ ಪರಿಶೀಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಸಮಿತಿಯನ್ನು ರಚನೆ ಮಾಡಲು ನಿರ್ಧರಿಸಲಾಗಿದೆ” ಎಂದಿದ್ದಾರೆ. ಅಲ್ಲದೇ, ಈ ಐಡಿಯಾಗೆ ಬಹುತೇಕ ಪ್ರತಿಪಕ್ಷಗಳು ಒಪ್ಪಿಗೆ ಸೂಚಿಸಿವೆ, ಆದರೆ ಎಡಪಕ್ಷಗಳು ಅದರ ಅನುಷ್ಠಾನದ ಬಗ್ಗೆ ಕೆಲವೊಂದು ಪ್ರಶ್ನೆಗಳನ್ನು ಹೊಂದಿವೆ ಎಂದಿದ್ದಾರೆ.
ಸಭೆಯ ಬಳಿಕ ಟ್ವಿಟ್ ಮಾಡಿರುವ ಮೋದಿಯವರು, “ವಿವಿಧ ಪಕ್ಷಗಳ ಅಧ್ಯಕ್ಷರೊಂದಿಗೆ ಮಹತ್ವದ ಸಭೆಯನ್ನು ನಡೆಸಿದೆ. ರಾಷ್ಟ್ರ ಹಿತಾಸಕ್ತಿಯ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಮಾಹಿತಿದಾಯಕ ಸಲಹೆಗಳನ್ನು ನೀಡಿದ ವಿವಿಧ ಪಕ್ಷಗಳ ನಾಯಕರಿಗೆ ಧನ್ಯವಾದಗಳು” ಎಂದಿದ್ದಾರೆ.
Had a great meeting with Presidents of various political parties.
Multiple issues of national importance were discussed.
I thank the various leaders for their informed suggestions.
Here are highlights from the meeting. https://t.co/HSeg1h8u7L
— Narendra Modi (@narendramodi) June 19, 2019
ಒಂದೇ ಬಾರಿಗೆ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯನ್ನು ನಡೆಸುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ ಎಂಬ ದೃಢ ನಿಲುವನ್ನು ಬಿಜೆಪಿ ತಾಳಿದೆ, ಆದರೆ ಕೆಲ ಪಕ್ಷಗಳು ಇದು ವಿಕೇಂದ್ರೀಕರಣಕ್ಕೆ ಮಾರಕ ಎಂಬ ವಾದವನ್ನು ಮುಂದಿಟ್ಟಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.