ನವದೆಹಲಿ: ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಅವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಪತ್ರ ಬರೆದಿರುವ ಪ್ರಧಾನಿ ನರೇಂದ್ರ ಮೋದಿಯವರು, ತೀಕ್ಷ್ಣ ಸಂದೇಶವನ್ನೇ ರವಾನಿಸಿದ್ದಾರೆ. ಭಯೋತ್ಪಾದನೆಯನ್ನು ಮಟ್ಟ ಹಾಕಿದರೆ ಮಾತ್ರ ಪಾಕಿಸ್ಥಾನದೊಂದಿಗೆ ಮಾತುಕತೆ ನಡೆಸುವುದಾಗಿ ಪುನರುಚ್ಚರಿಸಿದ್ದಾರೆ.
“ಮಾತುಕತೆಗೆ ನಂಬಿಕೆಯ, ಭಯ ಮುಕ್ತ, ಹಿಂಸಾಚಾರ ಮುಕ್ತ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಗತ್ಯ” ಎಂದು ಮೋದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪಾಕಿಸ್ಥಾನ ಪ್ರಧಾನಿ ಅಭಿನಂದನಾಪೂರ್ವಕವಾಗಿ ಕಳುಹಿಸಿದ್ದ ಪತ್ರಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿವರು ರಾಜತಾಂತ್ರಿಕ ಶಿಷ್ಟಾಚಾರದ ಅನ್ವಯ ಪ್ರತಿಯಾಗಿ ಪತ್ರವನ್ನು ಬರೆದಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಮೋದಿಯವರು ಎರಡನೆಯ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಅಭಿನಂದನೆಗಳನ್ನು ತಿಳಿಸಿ ಪತ್ರ ಬರೆದಿದ್ದ ಇಮ್ರಾನ್ ಖಾನ್ ಅವರು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಸಲುವಾಗಿ ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ಥಾನ ಬಯಸುತ್ತಿದೆ ಎಂದಿದ್ದರು.
ಆದರೆ ಪ್ರಧಾನಿಯವರು ಭಯೋತ್ಪಾದನೆ ಮುಕ್ತ ವಾತಾವರಣದಲ್ಲಿ ಮಾತ್ರ ಮಾತುಕತೆ ನಡೆಸಲು ಸಾಧ್ಯ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿಗೆ ಶಾಂಘೈ ಕೊ-ಅಪರೇಶನ್ ಸಮಿತ್ನಲ್ಲಿ ಭಾಗಿಯಾಗಿದ್ದ ವೇಳೆಯಲ್ಲೂ ಪ್ರಧಾನಿ ಮೋದಿಯವರು ಇಮ್ರಾನ್ ಖಾನ್ ಅವರನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.