ನವದೆಹಲಿ: ಇಂದಿರಾ ಗಾಂಧಿ ಸರ್ಕಾರವು ಭಾರತದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿ 44 ವರ್ಷಗಳಾಗಿವೆ. ಇಂದು ದೇಶ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಸ್ಮರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ತುರ್ತು ಪರಿಸ್ಥಿತಿ ಭಾರತೀಯ ಇತಿಹಾಸದ ಒಂದು ಕರಾಳ ಅಧ್ಯಾಯ ಎಂದಿದ್ದಾರೆ.
ಟ್ವಿಟ್ ಮಾಡಿರುವ ಅವರು, “ಜೂನ್ 25, 1975 ರಂದು ತುರ್ತು ಪರಿಸ್ಥಿತಿ ಘೋಷಣೆ ಮತ್ತು ನಂತರದ ಘಟನೆಗಳು ಭಾರತದ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ಈ ದಿನ, ಭಾರತೀಯರಾದ ನಾವೆಲ್ಲರೂ ನಮ್ಮ ಸಂಸ್ಥೆಗಳು ಮತ್ತು ಸಂವಿಧಾನದ ಸಮಗ್ರತೆಯನ್ನು ಎತ್ತಿಹಿಡಿಯುವ ಮಹತ್ವವನ್ನು ಸದಾ ನೆನಪಿನಲ್ಲಿಡಬೇಕು” ಎಂದಿದ್ದಾರೆ.
The declaration of Emergency on June 25, 1975 and the incidents that followed, mark as one of the darkest chapters in India’s history.
On this day, we the people of India should always remember the importance of upholding the integrity our institutions and the Constitution.
— Rajnath Singh (@rajnathsingh) June 25, 2019
1975 ರ ಜೂನ್ 25 ರಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು, ಆ ಸಮಯದಲ್ಲಿದ್ದ ನಾಗರಿಕ ಮತ್ತು ರಾಜಕೀಯ ಅಶಾಂತಿಯ ಕಾರಣಕ್ಕೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ನಾಯಕರನ್ನು, ಜನಸಾಮಾನ್ಯರನ್ನು ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಯಿತು. ಕೆಲವರು ಈಗಲೂ ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳುತ್ತಾರೆ, ಆದರೆ ಸಮಸ್ತ ಭಾರತೀಯರು ಇದನ್ನು ಭಾರತೀಯ ಪ್ರಜಾಪ್ರಭುತ್ವದ ಕಳಂಕವೆಂದೇ ಪರಿಗಣಿಸುತ್ತಾರೆ.
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಬಳಿಕ ಸ್ವತಂತ್ರ ಭಾರತದ ಇತಿಹಾಸದಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಅಧಿಕಾರವನ್ನು ಕಳೆದುಕೊಂಡಿತು ಮತ್ತು ಜನತಾ ಪಕ್ಷವು ಹಲವಾರು ಸಣ್ಣ ರಾಜಕೀಯ ಪಕ್ಷಗಳ ಬೆಂಬಲದೊಂದಿಗೆ 1977ರ ಲೋಕಸಭಾ ಚುನಾವಣೆಯಲ್ಲಿ ಸರ್ಕಾರವನ್ನು ರಚನೆ ಮಾಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.