ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಕಣಿವೆ ರಾಜ್ಯದ ಮಿಲಿಟರಿ ಮತ್ತು ನಾನ್ ಮಿಲಿಟರಿ ಸಾಧನೆಗಳ ಬಗ್ಗೆ ಮಾತುಕತೆಗಳನ್ನು ನಡೆಸಲಿದ್ದಾರೆ. ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಭೇಟಿಯಾಗಿಯೂ ಅವರು ವಿವಿಧ ವಿಷಯಗಳ ಬಗ್ಗೆ ಮಾತುಕತೆಯನ್ನು ನಡೆಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಹುರಿಯತ್ ಕಾನ್ಫರೆನ್ಸ್ ಪ್ರತ್ಯೇಕತಾವಾದಿಗಳ ವಿಚಾರ ಪ್ರಸ್ತಾಪಗೊಳ್ಳಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಅಮಿತ್ ಶಾ ಮತ್ತು ಗೃಹ ಕಾರ್ಯದರ್ಶಿ ರಾಜೀವ್ ಗುಬಾ ಅವರು ಜಮ್ಮಕಾಶ್ಮೀರಕ್ಕೆ ಇಂದು ತೆರಳಿದ್ದು, ಸಂಜೆಯ ವೇಳೆಗೆ ವಾಪಾಸ್ ಆಗಲಿದ್ದಾರೆ.
ಕಣಿವೆ ರಾಜ್ಯದಲ್ಲಿನ ಭದ್ರತಾ ಪರಿಸ್ಥಿತಿಗಳನ್ನು ಅವಲೋಕಿಸಲು ಮತ್ತು ಕೇಂದ್ರದ ವತಿಯಿಂದ ಅಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆಪರಿಶೀಲನೆ ನಡೆಸಲು ಅವರು ಈ ಭೇಟಿಯನ್ನು ಕೈಗೊಂಡಿದ್ದಾರೆ.
ಭಾರತೀಯ ಸೇನೆ, ಬಿಎಸ್ ಎಫ್, ಸಿಆರ್ಪಿಎಫ್ ಮತ್ತು ರಾಜ್ಯ ಪೊಲೀಸ್ ಅನ್ನು ಒಳಗೊಂಡ ಯುನಿಫೈಡ್ ಕಮಾಂಡ್ ಜೊತೆ ಅವರು ಸಭೆಯನ್ನು ನಡೆಸಲಿದ್ದು, ಭಯ ಮುಕ್ತ ಮತ್ತು ಶಾಂತಿಯುತ ಅಮರನಾಥ ಯಾತ್ರೆಗಾಗಿ ಕೈಗೊಂಡ ಕ್ರಮಗಳ ಬಗ್ಗೆ, ಭವಿಷ್ಯದಲ್ಲಿ ನಡೆಯಲಿರುವ ಉಗ್ರ ವಿರೋಧಿ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಲಿದ್ದಾರೆ.
ಮೋದಿಯವರ ಎರಡನೇಯ ಅವಧಿಯಲ್ಲಿ ಗೃಹ ಸಚಿವರಾಗಿ ನೇಮಕವಾಗಿರುವ ಅಮಿತ್ ಶಾ ಅವರು, ದೇಶದ ಆಂತರಿಕ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಈಗಾಗಲೇ ರವಾನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.