ನವದೆಹಲಿ: ಪಿ.ವಿ. ನರಸಿಂಹ ರಾವ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ಸಿಗರು ಕ್ಷಮೆಯಾಚನೆ ಮಾಡಬೇಕು ಎಂದು ರಾವ್ ಅವರ ಮೊಮ್ಮಗ ಎನ್. ವಿ. ಸುಭಾಷ್ ಆಗ್ರಹಿಸಿದ್ದಾರೆ.
ಜೂನ್ 28 ರಂದು ನರಸಿಂಹ ರಾವ್ ಅವರ ಜನ್ಮದಿನ. ಈ ಹಿನ್ನಲೆಯಲ್ಲಿ ಮಾತನಾಡಿರುವ ಸುಭಾಷ್, ಕಾಂಗ್ರೆಸ್ ಮತ್ತು ಗಾಂಧೀ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನರಸಿಂಹ ರಾವ್ ದೇಶಕ್ಕೆ ಕೊಟ್ಟ ಕೊಡುಗೆಗಳನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.
ಗಾಂಧಿ ಕುಟುಂಬವನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನು ಕಾಪಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಅವರು ಭಾವಿಸಿದ ಕಾರಣದಿಂದಾಗಿಯೇ ಸಮರ್ಥ ನಾಯಕನಾಗಿದ್ದರೂ ರಾವ್ ಅವರನ್ನು ಮೂಲೆಗುಂಪು ಮಾಡಲಾಯಿತು. ಆದರೆ ಅವರು ಗಾಂಧಿ ಕುಟುಂಬದ ನಿಷ್ಠಾವಂತ ಮತ್ತು ಮಾರ್ಗದರ್ಶಕ ಮುಖಂಡನಾಗಿದ್ದರು ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಬಳಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದರು. ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಯಾರೂ ಮರೆಯಲಾರರು. ಆದರೂ ಅವರನ್ನು 1996ರ ಕಾಂಗ್ರೆಸ್ ಸೋಲಿಗೆ ಹೊಣೆ ಮಾಡಲಾಯಿತು. ಇದಕ್ಕೆ ಗಾಂಧೀ ಪರಿವಾರ ಈಗ ಕ್ಷಮೆಯಾಚನೆ ಮಾಡಬೇಕು ಮತ್ತು ಅವರಿಗೆ ಗೌರವ ಸೂಚಿಸಬೇಕು ಎಂದು ಸುಭಾಷ್ ಆಗ್ರಹಿಸಿದ್ದಾರೆ.
ಎನ್. ವಿ. ಸುಭಾಷ್ ಅವರು ತೆಲಂಗಾಣ ಬಿಜೆಪಿ ಘಟಕದ ವಕ್ತಾರರೂ ಆಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.