ಒಸಾಕಾ: ಜಪಾನಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಯ ಕೊನೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಅಲ್ಲದೇ, ಅವರು ಆಸ್ಟ್ರೇಲಿಯಾ ಅಧ್ಯಕ್ಷ ಸ್ಕಾಟ್ ಮಾರಿಸನ್ ಸೇರಿದಂತೆ ಜಗತ್ತಿನ ಹಲವಾರು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ಕಾರ್ಯಾಲಯ, “ಒಸಾಕಾದಲ್ಲಿನ ಮಾತುಕತೆ ಮುಂದುವರೆದಿದೆ. ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಅವರೊಂದಿಗೆ ಜಿ20 ಶೃಂಗಸಭೆಯ ಸೈಡ್ಲೈನಿನಲ್ಲಿ ಮಾತುಕತೆ ನಡೆಸಲಾಗಿದೆ. ಉಭಯ ನಾಯಕರು ಭಾರತ-ಟರ್ಕಿ ನಡುವಣ ಬಲಿಷ್ಠ ಬಾಂಧವ್ಯದ ವೃದ್ಧಿಯ ಬಗ್ಗೆ ಚರ್ಚಿಸಿದರು” ಎಂದಿದೆ.
ಶೃಂಗಸಭೆಯ ಮೊದಲ ದಿನವಾದ ನಿನ್ನೆ ಪ್ರಧಾನಿಯವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಜಪಾನ್ ಪ್ರಧಾನಿ ಅಬೆ ಶಿಂಜೋ ಜೊತೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಇಂಡೋ-ಪೆಸಿಫಿಕ್ ಪ್ರದೇಶ, ಕನೆಕ್ಟಿವಿಟಿ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಮುಖ್ಯವಾಗಿ ಚರ್ಚಿತಗೊಂಡಿದೆ. ಪ್ರಧಾನಿಯವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೂ ಅನೌಪಚಾರಿಕ ಸಭೆಯನ್ನು ನಡೆಸಿದ್ದಾರೆ.
ಬ್ರಿಕ್ಸ್ ನಾಯಕರೊಂದಿಗೂ ಪ್ರಧಾನಿ ಮೋದಿ ಮಾತುಕತೆಯನ್ನು ನಡೆಸಿದ್ದಾರೆ.
ಅಲ್ಲದೇ, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು, ಜಪಾನಿನ ವಿದೇಶಾಂಗ ಸಚಿವ ತರೊ ಕೊನೊ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.