ನವದೆಹಲಿ: ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸದಾ ಸಕ್ರಿಯವಾಗಿರುವ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ (SDRF)ಗಳನ್ನು ಬಲಪಡಿಸಲು ಮತ್ತು ಸುಧಾರಣೆಗೊಳಿಸಲು ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಸವಲತ್ತುಗಳನ್ನು ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ವಾರ್ಷಿಕ ಕಾನ್ಫರೆನ್ಸ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಉಪಕರಣಗಳನ್ನು ಸುಧಾರಣೆಗೊಳಿಸಲು ಮತ್ತು ದೇಶೀಯವಾಗಿಸಲು ಡಿಆರ್ಡಿಒ ಜೊತೆ ಸಹಕರಿಸುವಂತೆ ಎನ್ಡಿಆರ್ಎಫ್ಗೆ ಒತ್ತಾಯಿಸಿದರು. ವಿಪತ್ತು ಪ್ರತಿಕ್ರಿಯೆಯಲ್ಲಿ ಭಾರತವು ಮುನ್ನಡೆ ಸಾಧಿಸಲು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಉಪಕರಣಗಳು ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು.
Met the brave Disaster Response Teams.
Nation is proud of their dedication and commitment. pic.twitter.com/j7QJY7nblU
— Amit Shah (@AmitShah) June 29, 2019
ಗೃಹರಕ್ಷಕರು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸೇವೆಗಳೊಂದಿಗೆ ಸಮಾಲೋಚಿಸಿ ರಾಜ್ಯ ವಿಪತ್ತು ಸ್ಪಂದನಾ ಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ಕುರಿತು ಮಾತನಾಡಿದ ಅವರು, ಭಾರತವು ನೈಸರ್ಗಿಕ ವಿಪತ್ತು ಪೀಡಿತ ದೇಶವಾಗಿರುವುದರಿಂದ ಎನ್ಡಿಆರ್ಎಫ್ ವಿಪತ್ತು ಪಡೆ ಈ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಪರಿಣತಿಯನ್ನು ಹೊಂದಿರಬೇಕು ಮತ್ತುವಿಶ್ವ ದರ್ಜೆಯ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಹೊಂದಿರಬೇಕು ಎಂದು ಹೇಳಿದರು.
ಎನ್ಡಿಆರ್ಎಫ್ನ ಉತ್ತಮ ಕಾರ್ಯಗಳನ್ನು ಅವರು ಈ ವೇಳೆ ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.