ನವದೆಹಲಿ: ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲೂ ನಡೆಸಬೇಕು ಎಂಬುದು ಕರ್ನಾಟಕ ಸೇರಿದಂತೆ ಹಲವಾರು ದಕ್ಷಿಣ ಭಾರತ ರಾಜ್ಯಗಳ ಬೇಡಿಕೆಯಾಗಿದೆ. ಇದೀಗ ಈ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಗಂಭೀರ ಚಿಂತನೆಯನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕರ್ನಾಟಕದ ರಾಜ್ಯಸಭಾ ಸಂಸದ ಜಿ.ಸಿ ಚಂದ್ರಶೇಖರ್ ಅವರು ಶೂನ್ಯ ವೇಳೆಯಲ್ಲಿ, ಬ್ಯಾಂಕಿಂಗ್ ಮತ್ತು ಇತರ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲೀಷ್ ಮತ್ತು ಹಿಂದಿಯ ಜೊತೆಗೆ ಕನ್ನಡದಲ್ಲೂ ನಡೆಸಬೇಕು, ಇದರಿಂದ ಸ್ಥಳಿಯ ಜನರಿಗೆ ಸಹಾಯವಾಗುತ್ತದೆ ಎಂದು ವಿಷಯ ಪ್ರಸ್ತಾಪಿಸಿದರು.
ರಾಜಶೇಖರ್ ಅವರು ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದರು, ಭಾಷಾಂತರ ಮಾಡುವವರು ಯಾರೂ ಇಲ್ಲದ ಕಾರಣ ಸ್ವತಃ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ಇಂಗ್ಲೀಷ್ನಲ್ಲಿ ಅದನ್ನು ಭಾಷಾಂತರ ಮಾಡಿದರು.
ಇದಕ್ಕೆ ಸ್ಪಂದನೆ ನೀಡಿದ ಸೀತಾರಾಮನ್ ಅವರು, ಈ ವಿಷಯ ಅತ್ಯಂತ ಗಂಭೀರವಾಗಿದ್ದು, ಲೋಕಸಭಾ ಸಂಸದರು ಕೂಡ ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳಲ್ಲೇ ಪರೀಕ್ಷೆ ನಡೆಸುವಂತೆ ನನ್ನ ಬಳಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.