ನವದೆಹಲಿ: 2016ರಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ರುದ್ರೇಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯ, ಬೆಂಗಳೂರು ನಿವಾಸಿ ಅಸೀಂ ಶರೀಫ್ ವಿರುದ್ಧ ಕೊಲೆ ಮತ್ತು ಭಯೋತ್ಪಾದನ ಪ್ರಕರಣವನ್ನು ದಾಖಲಿಸುವ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡ (ಎನ್ಐಎ)ವು ಅಸೀಂ ಶರೀಫ್ ವಿರುದ್ಧ ಕೊಲೆ ಮತ್ತು ಭಯೋತ್ಪಾದನಾ ಪ್ರಕರಣವನ್ನು ದಾಖಲಿಸಿದೆ. ಕರ್ನಾಟಕ ಹೈಕೋರ್ಟ್ ಇದಕ್ಕೆ ಸಮ್ಮತಿಸಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಜಯ್ ರಶ್ತೊಗಿ ಮತ್ತು ಎನ್ ವಿ ರಾಮಣ್ಣ ಅವರು ಹೈಕೋರ್ಟ್ ನಿರ್ಧಾರವನ್ನು ಎತ್ತಿ ಹಿಡಿದಿದ್ದಾರೆ.
2016ರ ಅಕ್ಟೋಬರ್ 16ರಂದು ಆರ್ಎಸ್ಎಸ್ ಶಾಖೆ ಮುಗಿಸಿ ಬರುತ್ತಿದ್ದ ರುದ್ರೇಶ್ ಅವರನ್ನು ಹಾಡುಹಗಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲು ಸೂಕ್ತ ಸಾಕ್ಷ್ಯ ಇದೆ ಎಂದಿದೆ.
ಆರೋಪಿ ಅಸಿಂ ಶರೀಫ್ ಜನರಲ್ಲಿ ಭಯ ಹುಟ್ಟಿಸುವ ಸಲುವಾಗಿ ಮತ್ತಿಬ್ಬರು ಆರ್ಎಸ್ಎಸ್ ಕಾರ್ಯಕರ್ತರನ್ನು ಕೊಲ್ಲುವ ಯೋಜನೆ ರೂಪಿಸಿದ್ದ. ಇದಕ್ಕಾಗಿ ಆತ ಇತರ ನಾಲ್ಕು ಪಿಎಫ್ ಐ ಸದಸ್ಯರ ಬೆಂಬಲವನ್ನು ಪಡೆದುಕೊಂಡಿದ್ದ ಎಂದು ರಾಷ್ಟ್ರೀಯ ತನಿಖಾ ದಳ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.