ನವದೆಹಲಿ: ಸಮಗ್ರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ಮುಂಬರುವ ತಿಂಗಳುಗಳಲ್ಲಿ ಐಟಿ ಕ್ಷೇತ್ರದಲ್ಲಿ ಸುಮಾರು 2 ಲಕ್ಷ 50,000 ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಮಹೇಂದ್ರ ನಾಥ್ ಪಾಂಡೆ ಹೇಳಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪಾಂಡೆ, ವಿಶ್ವದ ಅತಿದೊಡ್ಡ ಯುವ ಶಕ್ತಿಯನ್ನು ನಿಜವಾದ ನುರಿತ ಶಕ್ತಿಯನ್ನಾಗಿ ಪರಿವರ್ತಿಸುವುದು ಎನ್ಡಿಎ ಸರ್ಕಾರದ ದೂರದೃಷ್ಟಿಯಾಗಿದೆ ಎಂದಿದ್ದಾರೆ.
ದೇಶದ ಡಿಜಿಟಲ್ ತಂತ್ರಜ್ಞಾನದಲ್ಲಿ ಆಗುತ್ತಿರುವ ಕ್ಷಿಪ್ರ ಪ್ರಗತಿಯು ಈ ವಲಯವನ್ನು 7.2 ಬಿಲಿಯನ್ ಡಾಲರ್ಗೆ ಕೊಂಡೊಯ್ಯಬಹುದು ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. 2018 ರಲ್ಲಿ ಈ ವಲಯವು 2.5 ಬಿಲಿಯನ್ನಲ್ಲಿತ್ತು.
ಮುಂಬರುವ ವರ್ಷಗಳಲ್ಲಿ ಭಾರತವು ಐಟಿ ಕ್ಷೇತ್ರದಲ್ಲಿ ಮುಂದುವರಿದ ದೇಶಗಳೊಂದಿಗೆ ಸರಿ ಸಮಾನವಾಗಿ ನಿಲ್ಲಲಿದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಆಧುನಿಕ ಜ್ಞಾನ ಮತ್ತು ಕೌಶಲ್ಯದ ಮೂಲಕ ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ಮುನ್ನಡೆಸಬೇಕೆಂದು ಅವರು ಯುವಕರಿಗೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.