ನವದೆಹಲಿ: ಕಾಂಗ್ರೆಸ್ ಪಾಳಯದಲ್ಲಿ ಅಧ್ಯಕ್ಷ ಹುದ್ದೆಯ ಬಗೆಗಿನ ಡ್ರಾಮ ಮುಂದುವರೆದಿದೆ. ರಾಹುಲ್ ಗಾಂಧಿಯವರು ನಾನು ಪಕ್ಷದ ಅಧ್ಯಕ್ಷನಾಗಿ ಉಳಿದಿಲ್ಲ ಎಂದು ಬುಧವಾರ ಘೋಷಣೆ ಮಾಡಿದ್ದಾರೆ. ಅಲ್ಲದೇ, ನೂತನ ಅಧ್ಯಕ್ಷರನ್ನು ಪಕ್ಷ ಆರಿಸಲೇ ಬೇಕಾಗಿದೆ ಎಂದಿದ್ದಾರೆ. ಅವರು ಹೇಳುವಂತೆ ಈಗಾಗಲೇ ಅವರು ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ.
ಯಾವುದೇ ವಿಳಂಬವನ್ನು ಮಾಡದೆ ಕಾಂಗ್ರೆಸ್ ತನ್ನ ಅಧ್ಯಕ್ಷರನ್ನು ಶೀಘ್ರದಲ್ಲೇ ನೇಮಿಸಬೇಕು ಎಂದಿರುವ ಅವರು, ಚುನಾವಣಾ ಪ್ರಕ್ರಿಯೆಯಲ್ಲೂ ತಾನು ಭಾಗಿಯಾಗುವುದಿಲ್ಲ ಎಂದಿದ್ದಾರೆ.
ರಾಹುಲ್ ತಮ್ಮ ರಾಜೀನಾಮೆಯನ್ನು ವಾಪಾಸ್ ತೆಗೆದುಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಕ್ಷದ ಕಾರ್ಯಕರ್ತನೊಬ್ಬ ನಿನ್ನೆ ದೆಹಲಿ ಕಾಂಗ್ರೆಸ್ ಕಛೇರಿ ಮುಂಭಾಗದಲ್ಲಿ ಡ್ರಾಮ ನಡೆಸಿದ ತರುವಾಯ ರಾಹುಲ್ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ತಾನು ರಾಜೀನಾಮೆ ನೀಡುವುದಾಗಿ ರಾಹುಲ್ ಹೇಳಿಕೊಂಡಿದ್ದರು. ಆದರೆ ಇದುವರೆಗೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಆದರೆ ಇಂದು ಅವರು ತಾನು ಪಕ್ಷದ ಅಧ್ಯಕ್ಷನಾಗಿ ಉಳಿದಿಲ್ಲ ಎಂದು ಘೋಷಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಂದಿನ ನಡೆ ಏನಾಗಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
‘ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಲು ನಾನು ಹೆಮ್ಮೆ ಪಡುತ್ತೇವೆ, ನಮ್ಮ ಪಕ್ಷದ ಮೌಲ್ಯ ಮತ್ತು ಸಿದ್ಧಾಂತಗಳು ಈ ಸುಂದರ ರಾಷ್ಟ್ರ ನಿರ್ಮಾಣಕ್ಕೆ ಜೀವವನ್ನೇ ತೇಯ್ದಿದೆ. ಅಪಾರ ಪ್ರೀತಿ ಮತ್ತು ಆತ್ಮೀಯತೆಗಾಗಿ ನಾನು ಈ ದೇಶ ಮತ್ತು ಪಕ್ಷಕ್ಕೆ ಚಿರ ಋಣಿಯಾಗಿದ್ದೇನೆ. ಜೈ ಹಿಂದ್’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
It is an honour for me to serve the Congress Party, whose values and ideals have served as the lifeblood of our beautiful nation.
I owe the country and my organisation a debt of tremendous gratitude and love.
Jai Hind 🇮🇳 pic.twitter.com/WWGYt5YG4V
— Rahul Gandhi (@RahulGandhi) July 3, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.