ಲಕ್ನೋ: ಎರಡು ವರ್ಷಗಳೊಳಗೆ ಉತ್ತರಪ್ರದೇಶದ ಪ್ರತಿ ಮನೆಗೂ ಪೈಪ್ ನೀರನ್ನು ಒದಗಿಸುವುದಾಗಿ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ ಅವರು ಭರವಸೆಯನ್ನು ನೀಡಿದ್ದಾರೆ. ಅಲ್ಲದೇ, ಈ ವಿಷಯದಲ್ಲಿ ಕರ್ತವ್ಯಲೋಪವನ್ನು ಎಸಗಿದರೆ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನೂ ಅಧಿಕಾರಿಗಳಿಗೆ ರವಾನಿಸಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀರಿನ ಪೂರೈಕೆ ಮತ್ತು ಒಳಚರಂಡಿ ವ್ಯವಸ್ಥೆಯನ್ನು ನೋಡಿಕೊಳ್ಳುವ ಉತ್ತರಪ್ರದೇಶ ಜಲ ನಿಗಮದ ಪರಿಶೀಲನಾ ಸಭೆಯ ವೇಳೆ ದೂರಗಳನ್ನು ಸ್ವೀಕರಿಸಲಾಗಿದೆ. ಯಾರು ಸರಿಯಾಗಿ ಕರ್ತವ್ಯವನ್ನು ನಿರ್ವಹಿಸುದಿಲ್ಲವೋ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿ ಜೈಲಿಗೆ ಕಳುಹಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಜಾರಿ ನಿರ್ದೇಶನಾಲಯವು ಅವರ ಆಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದಿದ್ದಾರೆ. ನಮಾಮಿ ಗಂಗಾ ಯೋಜನೆಯ ನಿಧಾನಗತಿಯ ಕಾರ್ಯದ ಬಗ್ಗೆಯೂ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಪೈಪ್ ನೀರನ್ನು ಎಲ್ಲಾ ಮನೆಗಳಿಗೂ ತಲುಪಿಸುವ ಕಾರ್ಯವನ್ನು ಈಗಾಗಲೇ ಸರ್ಕಾರ ಆರಂಭಿಸಿದೆ ಎಂದಿದ್ದಾರೆ.
ಕೇಂದ್ರದ ಸಹಾಯದೊಂದಿಗೆ ಉತ್ತರಪ್ರದೇಶದ ಪ್ರತಿ ಗ್ರಾಮೀಣ ಮನೆಗೂ ಎರಡು ವರ್ಷಗಳದೊಳಗೆ ಪೈಪ್ ನೀರನ್ನು ಪೂರೈಕೆ ಮಾಡಲಾಗುವುದು ಎಂಬ ಭರವಸೆಯನ್ನು ಅವರು ನೀಡಿದ್ದಾರೆ. ಈಗಾಗಲೇ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.