ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಹಲವು ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳುವ ಸ್ಥಿತಿಗೆ ಬಂದು ತಲುಪಿದೆ. ಈ ಹಿನ್ನಲೆಯಲ್ಲಿ ಸಿಂಗ್ ಈ ಹೇಳಿಕೆಯನ್ನು ನೀಡಿದ್ದಾರೆ.
ಸಂಸತ್ತಿನಲ್ಲಿ ಪ್ರತಿಪಕ್ಷಗಳ ಸಂಸದರು, ಕರ್ನಾಟಕದ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ರಾಜನಾಥ್ ಅವರು “ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಮತ್ತು ಬಿಜೆಪಿ ಯಾವುದೇ ಸಂಬಂಧವಿಲ್ಲ. ನಮ್ಮ ಪಕ್ಷವು ಇತರ ಪಕ್ಷದ ನಾಯಕರ ಮೇಲೆ ಒತ್ತಡವನ್ನು ಎಂದಿಗೂ ಹೇರುವುದಿಲ್ಲ. ಕಾಂಗ್ರೆಸ್ ಶಾಸಕರ ರಾಜೀನಾಮೆ ವಿಷಯವನ್ನು ಆರಂಭಿಸಿದ್ದೇ ರಾಹುಲ್ ಗಾಂಧಿ” ಎಂದಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಪಕ್ಷದ 13 ಮಂದಿ ಶಾಸಕರು ರಾಜೀನಾಮೆಯನ್ನು ನೀಡಿದ ಹಿನ್ನಲೆಯಲ್ಲಿ ಸರ್ಕಾರ ಬಿದ್ದು ಹೋಗುವ ಪರಿಸ್ಥಿತಿಯನ್ನು ತಲುಪಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಎಲ್ಲಾ ಸಚಿವರುಗಳಿಂದ ರಾಜೀನಾಮೆಯನ್ನು ಪಡೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಮುಂದಿನ ನಡೆ ಏನು ಎಂಬುದು ಶೀಘ್ರದಲ್ಲೇ ಗೊತ್ತಾಗಲಿದೆ.
ಇನ್ನೊಂದೆಡೆ ಬೆಳವಣಿಗೆ ಬಗ್ಗೆ ಮಾತನಾಡಿರುವ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪನವರು, “ರಾಜೀನಾಮೆ ಪ್ರಕ್ರಿಯೆ ಮುಗಿದ ಬಳಿಕ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಏನಾಗುತ್ತದೆಯೋ ಕಾದು ನೋಡೋಣ” ಎಂದಿದ್ದಾರೆ. ಬಿಕ್ಕಟ್ಟು ಉದ್ಭವಿಸಲು ಬಿಜೆಪಿ ಕಾರಣವಲ್ಲ ಎಂದು ಅವರೂ ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.