ನವದೆಹಲಿ: ಕಳೆದ ಐದು ವರ್ಷಗಳಲ್ಲಿ 3,20,488 ಮಕ್ಕಳನ್ನು ಎಲ್ಲಾ ವಿಧದ ಬಾಲ ಕಾರ್ಮಿಕ ಪದ್ಧತಿಗಳಿಂದ ರಕ್ಷಿಸಲಾಗಿದೆ ಮತ್ತು ಅವರನ್ನು ಪುನರ್ವಸತಿ ಮತ್ತು ಔಪಚಾರಿಕ ಶಿಕ್ಷಣ ವ್ಯವಸ್ಥೆಗೆ ಒಳಪಡಿಸಲಾಗಿದೆ ಎಂದು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ (ಎನ್ಸಿಎಲ್ಪಿ) ಯೋಜನೆಯಡಿ ಸ್ಥಾಪಿಸಲಾದ ಜಿಲ್ಲಾ ಯೋಜನಾ ಸಂಘಗಳಿಂದ ಬಂದ ಮಾಹಿತಿಗಳಿಂದ ತಿಳಿದುಬಂದಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಖಾತೆ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಅವರು, “ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತಗಳಿಂದ ಪಡೆದ ಮಾಹಿತಿಯ ಪ್ರಕಾರ, ಪರಿಶೀಲನೆಗಳನ್ನು ನಡೆಸಿದ ಸಮಯದಲ್ಲಿ ಹಲವಾರು ಸಂಖ್ಯೆಯ ಬಾಲ ಕಾರ್ಮಿಕ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ, ಅವುಗಳ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಕಳೆದ ಐದು ವರ್ಷಗಳಿಂದ ಮಕ್ಕಳ ಮತ್ತು ಹದಿಹರೆಯದ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಕ್ಕೆ ಸಂಬಂಧಿಸಿದಂತೆ ಹಲವಾರು ಕ್ರಮಗಳನ್ನು ಜರುಗಿಸಲಾಗಿದೆ ಮತ್ತು ಶಿಕ್ಷೆಗಳನ್ನು ನೀಡಲಾಗಿದೆ” ಎಂದಿದ್ದಾರೆ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ, ಸರ್ಕಾರವು ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ಅನ್ನು ಜಾರಿಗೆ ತಂದಿದೆ. ಇದು 2016 ರ ಸೆಪ್ಟೆಂಬರ್ನಿಂದ ಅನುಷ್ಠಾನಕ್ಕೆ ಬಂದಿದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಕೆಲಸ ಅಥವಾ ಉದ್ಯೋಗವನ್ನು ಸಂಪೂರ್ಣವಾಗಿ ನಿಷೇಧಿಸಲು ತಿದ್ದುಪಡಿ ಕಾಯ್ದೆ ಅವಕಾಶ ಒದಗಿಸುತ್ತದೆ. ಅಪಾಯಕಾರಿ ಉದ್ಯೋಗಗಳು ಮತ್ತು ಪ್ರಕ್ರಿಯೆಗಳಲ್ಲಿ 14 ರಿಂದ 18 ವರ್ಷ ವಯಸ್ಸಿನ ಹದಿಹರೆಯದವರು ಭಾಗಿಯಾಗುವುದು ನಿಷೇಧ. ತಿದ್ದುಪಡಿ ಕಾಯ್ದೆಯು ಕಾಯಿದೆಯ ಉಲ್ಲಂಘನೆ ಮಾಡಿದ ಉದ್ಯೋಗದಾತರಿಗೆ ಕಠಿಣ ಶಿಕ್ಷೆಯನ್ನು ನೀಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.