ಬಿಜ್ನೋರ್: ಉತ್ತರಪ್ರದೇಶದ ಬಿಜ್ನೋರ್ನಲ್ಲಿನ ಮದರಸವೊಂದರಿಂದ ಬುಧವಾರ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜ್ನೋರ್ ಶೇರ್ಕೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, “ಈ ಮದರಸಕ್ಕೆ ಸಮಾಜ ಘಾತುಕ ವ್ಯಕ್ತಿಗಳು ಭೇಟಿ ನೀಡುತ್ತಾರೆ ಎಂಬ ಬಗ್ಗೆ ನಾವು ಮಾಹಿತಿಯನ್ನು ಪಡೆದುಕೊಂಡಿದ್ದೆವು. ಹೀಗಾಗಿ ಮದರಸದ ಆವರಣದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದೆವು ಮತ್ತು 5 ಪಿಸ್ತೂಲ್ ಹಾಗೂ ಹಲವಾರು ಗುಂಡುಗಳನ್ನು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ” ಎಂದಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ ಮತ್ತು ವಿಷಯದ ಬಗ್ಗೆ ತನಿಖೆಯನ್ನು ಮುಂದುವರೆಸಲಾಗಿದೆ ಎಂದಿದ್ದಾರೆ.
ಈ ಮದರಸದಲ್ಲಿ ಸುಮಾರು 25 ಮಕ್ಕಳು ಅಧ್ಯಯನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದರೊಳಗೆ ಅಕ್ರಮ ಚಟುವಟಿಕೆಗೆ ನಡೆಯುತ್ತಿರುವ ಬಗ್ಗೆ ಖಚಿತವಾದ ಮೂಲಗಳಿಂದ ಬಂದ ಮಾಹಿತಿಯನ್ನಾಧರಿಸಿದ ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.