ನವದೆಹಲಿ: ಸಂಸತ್ತಿನ ಕಲಾಪಗಳಿಗೆ ಗೈರು ಹಾಜರಾಗುತ್ತಿರುವ ಸಂಸದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದ್ದು, ಕಲಾಪಗಳು ನಡೆಯುವ ವೇಳೆ ಸಂಸದರು ಮತ್ತು ಸಚಿವರುಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದ್ದಾರೆ.
ಯಾರಾದರು ಸಂಸತ್ತಿನ ಕರ್ತವ್ಯಗಳನ್ನು ತಪ್ಪಿಸಿಕೊಂಡರೆ, ದಿನದ ಅಂತ್ಯದಲ್ಲಿ ಅದರ ಬಗ್ಗೆ ತನಗೆ ಮಾಹಿತಿಯನ್ನು ನೀಡಬೇಕು ಎಂದಿದ್ದಾರೆ. ಈ ಬಗ್ಗೆ ತನಗೆ ಮಾಹಿತಿಯನ್ನು ನೀಡುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಅಲ್ಲದೇ, ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳಲ್ಲೂ ಸಂಸದರು ಸಕ್ರಿಯವಾಗಿ ಭಾಗವಹಿಸಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಾಮಾಜಿಕ ಪ್ರಾಮುಖ್ಯತೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆಯನ್ನು ಹೆಚ್ಚಿಸುವಂತೆಯೂ ಅವರು ಸೂಚನೆಯನ್ನು ನೀಡಿದ್ದಾರೆ.
ಸಂಸತ್ತಿನ ಸದಸ್ಯರು ರಾಜಕೀಯವನ್ನು ಮೀರಿ ಕೆಲಸ ಮಾಡಬೇಕು ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ನೀರಿನ ಕೊರತೆಯ ವಿಷಯವನ್ನು ಉಲ್ಲೇಖಿಸಿದ ಅವರು, ಸಂಸದರು ಈ ಸಮಸ್ಯೆಯನ್ನು ಹೋಗಲಾಡಿಸಲು ಕಾರ್ಯಪ್ರವೃತ್ತರಾಗಬೇಕು ಎಂದಿದ್ದಾರೆ.
ಸಂಸದರು ಸ್ಥಳೀಯ ಅಧಿಕಾರಿಗಳೊಂದಿಗೆ ಇಂತಹ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಮತ್ತು ಸಾಮಾನ್ಯ ಜನರನ್ನು ಈ ಕಾರ್ಯದಲ್ಲಿ ಒಳಗೊಳ್ಳುವಂತೆ ಮಾಡಬೇಕು. ಜಿಲ್ಲಾಡಳಿತಗಳ ಸಹಯೋಗದೊಂದಿಗೆ ಕೆಲಸ ಮಾಡುವಂತೆ ಸಂಸದರಿಗೆ ಮೋದಿ ಸೂಚನೆಯನ್ನು ನೀಡಿದ್ದಾರೆ.
ಭಾರತದಿಂದ ಕ್ಷಯರೋಗವನ್ನು ನಿರ್ಮೂಲನೆ ಮಾಡಲು ಭಾರತ 2025ಕ್ಕೆ ಗುರಿಯನ್ನು ನಿಗದಿಪಡಿಸಿದರೆ, ಜಾಗತಿಕ ಮಟ್ಟದಲ್ಲಿ 2030ಕ್ಕೆ ನಿಗದಿಪಡಿಸಲಾಗಿದೆ. ಎಲ್ಲಾ ಸಂಸದರು ಈ ಗುರಿ ತಲುಪಲು ಶ್ರಮಿಸಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.