ನವದೆಹಲಿ: ಬಿಜೆಪಿಯ ಹಿರಿಯ ಮುಖಂಡ ಬಿಸ್ವಾ ಭೂಷಣ್ ಹರಿಚಂದನ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಮತ್ತು ಅನುಸೂಯಾ ಉಕೆಯ್ ಅವರನ್ನು ಛತ್ತೀಸ್ಗಢದ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ನೇಮಕ ಮಾಡಿದ್ದಾರೆ.
“ಛತ್ತೀಸ್ಗಢದ ರಾಜ್ಯಪಾಲರಾಗಿ ಸುಶ್ರಿ ಅನುಸೂಯಾ ಉಕೆಯ್, ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಸ್ವಾ ಭೂಷಣ್ ಹರಿಚಂದನ್ ಅವರನ್ನು ಭಾರತದ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ. ಇವರುಗಳ ತಮ್ಮ ಕಚೇರಿಯ ಉಸ್ತುವಾರಿ ವಹಿಸಿಕೊಂಡ ದಿನಾಂಕಗಳಿಂದ ಅಧಿಕಾರಾವಧಿ ಆರಂಭವಾಗಲಿದೆ” ಎಂದು ರಾಷ್ಟ್ರಪತಿ ಭವನ ಬಿಡುಗಡೆ ಮಾಡಿದ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಹರಿಚಂದನ್ ತಮ್ಮ ರಾಜಕೀಯ ಜೀವನವನ್ನು 1971 ರಲ್ಲಿ ಭಾರತೀಯ ಜನ ಸಂಘದ ಸದಸ್ಯರಾಗಿ ಪ್ರಾರಂಭಿಸಿದರು. ನಂತರ, ಅವರು ಬಿಜೆಎಸ್ನ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯರಾದರು, ಬಳಿಕ ಅದರ ರಾಜ್ಯ ಪ್ರಧಾನ ಕಾರ್ಯದರ್ಶಿಯಾದರು. ನಂತರ ಹರಿಚಂದನ್ ಜನತಾ ಪಕ್ಷವನ್ನು ಸೇರ್ಪಡೆಗೊಂಡು 1977 ರಲ್ಲಿ ಒರಿಸ್ಸಾದ ಚಿಲಿಕ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದರು. ಬಳಿಕ ಬಿಜೆಪಿಗೆ ಸೇರಿದ ಅವರು, 1980 ರಿಂದ 1988 ರವರೆಗೆ ಒರಿಸ್ಸಾದ ಬಿಜೆಪಿ ಮುಖ್ಯಸ್ಥರಾಗಿದ್ದರು. ಅವರು ಚಿಲಿಕಾ ಮತ್ತು ಭುವನೇಶ್ವರ ಕ್ಷೇತ್ರಗಳಿಂದ ಐದು ಬಾರಿ ಒರಿಸ್ಸಾ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ಛತ್ತೀಸ್ಗಢದ ಹೊಸ ರಾಜ್ಯಪಾಲರಾಗಿ ನೇಮಕವಾದ ಅನುಸೂಯ ಉಕೆಯ್ ಅವರು 1957 ರಲ್ಲಿ ಜನಿಸಿದ್ದು, ಬಿಜೆಪಿಯ ಸಕ್ರಿಯ ಸದಸ್ಯರಾಗಿದ್ದರು. ಮಧ್ಯಪ್ರದೇಶದಿಂದ ರಾಜ್ಯಸಭೆಯ ಸಂಸದರಾಗಿ ಆಯ್ಕೆಯಾಗಿದ್ದಾರೆ. ಉಕೆಯ್ ಅವರು ಈ ಹಿಂದೆ ಮಧ್ಯಪ್ರದೇಶ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಮಹಿಳೆಯರಿಗೆ, ವಿಶೇಷವಾಗಿ ಬುಡಕಟ್ಟು ಮಹಿಳೆಯರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಕಾರ್ಯವನ್ನು ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.