ನವದೆಹಲಿ: ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಿಂತು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣಕ್ಕೆ ಸಲಹೆ – ಸೂಚನೆಗಳನ್ನು, ಹೊಸ ಆಲೋಚನೆಗಳನ್ನು ಕಳುಹಿಸಿಕೊಡುವಂತೆ ಮೋದಿಯವರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಟ್ವಿಟ್ ಮಾಡಿರುವ ಅವರು, “ಆಗಸ್ಟ್ 15 ರ ನನ್ನ ಭಾಷಣಕ್ಕೆ ಅಮೂಲ್ಯವಾದ ಸಲಹೆ ಸೂಚನೆಗಳನ್ನು ಹಂಚಿಕೊಳ್ಳುವಂತೆ ನಿಮ್ಮೆಲ್ಲರನ್ನು ಆಹ್ವಾನಿಸಲು ನನಗೆ ಸಂತೋಷವಾಗುತ್ತಿದೆ. ನಿಮ್ಮ ಸಲಹೆಗಳನ್ನು ಕೆಂಪು ಕೋಟೆಯ ಮೇಲಿಂದ 130 ಕೋಟಿ ಭಾರತೀಯರು ಕೇಳುವಂತಾಗಲಿ. ನಮೋ ಅಪ್ಲಿಕೇಶನ್ನಲ್ಲಿ ವಿಶೇಷವಾಗಿ ರಚಿಸಲಾದ ಓಪನ್ ಫೋರಂನಲ್ಲಿ ನಿಮ್ಮ ಚಿಂತನೆಗಳನ್ನು ಹಂಚಿಕೊಳ್ಳಿ” ಎಂದಿದ್ದಾರೆ.
I am delighted to invite you all to share your valuable inputs for my speech on 15th August.
Let your thoughts be heard by 130 crore Indians from the ramparts of the Red Fort. Contribute on the specially created Open Forum on the NaMo App. https://t.co/seiXlFciCY pic.twitter.com/5OmhYIRVYB
— Narendra Modi (@narendramodi) July 19, 2019
ಜನಸಂಖ್ಯೆ, ನಿರುದ್ಯೋಗ ಬಿಕ್ಕಟ್ಟು, ರೈತರ ಆತ್ಮಹತ್ಯೆ ಮತ್ತು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಅದನ್ನು ಪ್ರಧಾನ ಮಂತ್ರಿಗೆ ಟ್ಯಾಗ್ ಮಾಡುವ ಕಾರ್ಯವನ್ನು ಜನರು ಮಾಡುತ್ತಿದ್ದಾರೆ. ಇವರೆಲ್ಲರ ಚಿಂತನೆ, ಸಲಹೆ, ಸೂಚನೆಗಳನ್ನು ಪರಾಮರ್ಶೆ ಮಾಡಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮೋದಿ ಉಲ್ಲೇಖಿಸಲಿದ್ದಾರೆ.
ಭಾರತವು ಈ ಬಾರಿ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, 6ನೇ ಬಾರಿಗೆ ಮೋದಿಯವರು ಕೆಂಪುಕೋಟೆಯಲ್ಲಿ ನಿಂತು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಳೆದ ವರ್ಷ ತಮ್ಮ ಭಾಷಣದಲ್ಲಿ, 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2022 ರ ವೇಳೆಗೆ ಭಾರತವು ರಾಷ್ಟ್ರಧ್ವಜವನ್ನು ಕೈಯಲ್ಲಿಟ್ಟುಕೊಂಡ ಮಗ ಅಥವಾ ಮಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತದೆ ಎಂದು ಹೇಳಿದ್ದರು. ಈ ಮೂಲಕ ಬಾಹ್ಯಾಕಾಶಕ್ಕೆ ಮನುಷ್ಯನನ್ನು ಕಳುಹಿಸುವ ನಾಲ್ಕನೇ ರಾಷ್ಟ್ರವಾಗಿ ಭಾರತ ಹೊಮ್ಮಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.