ನವದೆಹಲಿ: ರೇಡಿಯೋ ಜಾಹೀರಾತಿಗಾಗಿ 526 ಕೋಟಿ ಬಜೆಟ್ನ್ನು ಎತ್ತಿಟ್ಟಿರುವ ಎಎಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಸ್ವಯಂ ಪ್ರಚಾರದಲ್ಲಿ ತೊಡಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ಗೆ ಹೋಲಿಸಿದೆ.
ನಾಯಕ ಆರಾಧನ ಸಂಸ್ಕೃತಿಯನ್ನು ಹೊಂದಿರುವ ಎಎಪಿ, ಕೇವಲ ಒರ್ವ ವ್ಯಕ್ತಿ ಅರವಿಂದ್ ಕೇಜ್ರಿವಾಲ್ ಅವರ ಹೀರೋಯಿಸಂನ್ನು ತೋರಿಸಲು 526 ಕೋಟಿ ವೆಚ್ಚದ ಜಾಹೀರಾತನ್ನು ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಹಣವನ್ನು ರೋಗಿಗಳಿಗೆ, ಆಸ್ಪತ್ರೆ ನಿರ್ಮಿಸಲು, ರಸ್ತೆಗೆ, ಶಾಲೆಗಳಿಗೆ ಬಳಸಿಕೊಳ್ಳಬಹುದಿತ್ತು. ದೆಹಲಿ ಸರ್ಕಾರದ ಪ್ರಚಾರವನ್ನು 30-40 ಕೋಟಿಯಲ್ಲಿ ನಿರ್ವಹಿಸಲಾಗುತ್ತಿತ್ತು, ಇದೀಗ ಯಾಕೆ 526 ಕೋಟಿ ವ್ಯಯಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅಜಯ್ ಕುಮಾರ್ ಪ್ರಶ್ನಿಸಿದ್ದಾರೆ.
ಅಲ್ಲದೇ ಸ್ವಯಂ ಪ್ರಚಾರದಲ್ಲಿ ತೊಡಗಿರುವ ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ಗೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಹೋಲಿಕೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.