ನವದೆಹಲಿ: ಅಧಿವೇಶನದ ಸಂದರ್ಭದ ಭಾರೀ ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗಿಯಾಗಲು ಬಿಜೆಪಿಯ ಹಲವು ಮಂದಿ ಸಂಸದರಿಗೆ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಸದಸ್ಯತ್ವ ಅಭಿಯಾನವನ್ನು ಆಗಸ್ಟ್ 20 ರ ವರೆಗೆ 9 ದಿನಗಳ ಕಾಲ ವಿಸ್ತರಣೆ ಮಾಡಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿಯು ಆರಂಭಿಸಿರುವ ಸದಸ್ಯತ್ವ ಅಭಿಯಾನವು ಆಗಸ್ಟ್ 11 ರಂದು ಮುಕ್ತಾಯಗೊಳ್ಳಬೇಕಿತ್ತು, ಈಗಾಗಲೇ ಲಕ್ಷಾಂತರ ಭಾರತೀಯರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಧುರೀಣ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನವಾದ ಜೂನ್ 6 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಿದ್ದರು, ರಾಷ್ಟ್ರವ್ಯಾಪಿಯಾಗಿ ಪಕ್ಷದ ಸದಸ್ಯರನ್ನು ಹೆಚ್ಚಿಸುವ ಉದ್ದೇಶದಿಂದ ಈ ಅಭಿಯಾನವನ್ನು ಆರಂಭಿಸಲಾಗಿದೆ.
ಸದಸ್ಯತ್ವ ಅಭಿಯಾನಕ್ಕೆ ಅಭೂತಪೂರ್ವ ಯಶಸ್ಸು ದೊರಕುತ್ತಿರುವುದು ಕೂಡ ಅಭಿಯಾನವನ್ನು ಇನ್ನಷ್ಟು ದಿನಗಳವರೆಗೆ ವಿಸ್ತರಣೆಗೊಳಿಸಲು ಕಾರಣವಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಬರೋಬ್ಬರಿ 9 ಲಕ್ಷ ಜನಸಾಮಾನ್ಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಅತ್ಯಧಿಕ ಜನರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಇರಾದೆ ನಾಯಕರುಗಳಿಗಿದೆ. ಕೇಂದ್ರದ ಆಡಳಿತಾರೂಢ ಬಿಜೆಪಿಯು ಮುಂಬರುವ ರಾಜ್ಯ ಚುನಾವಣೆಗಳಿಗೆ ತನ್ನ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಈಗಾಗಲೇ ಸಜ್ಜಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.