ಚೆನ್ನೈ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನ 370ನೇ ವಿಧಿಯನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ತಮಿಳುನಾಡಿನ ಮೆಗಾಸ್ಟಾರ್ ರಜನೀಕಾಂತ್ ಅವರು ಶ್ಲಾಘಿಸಿದ್ದಾರೆ. ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ‘ಕೃಷ್ಣ-ಅರ್ಜುನ’ ಎಂದು ಅವರು ಬಣ್ಣಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಕಾಲದ ಸಹವರ್ತಿಯಾಗಿರುವ ಶಾ ಅವರನ್ನು ‘ಮಿಷನ್ ಕಾಶ್ಮೀರ’ದ ಯಶಸ್ವಿ ಸಾಧನೆಗಾಗಿ ಅಭಿನಂದಿಸಿರುವ ನಟ-ರಾಜಕಾರಣಿ ರಜನೀಕಾಂತ್ ಅವರು, ಕಾಶ್ಮೀರ ಬಗೆಗೆ ತೆಗೆದುಕೊಳ್ಳಲಾದ ನಿರ್ಧಾರವನ್ನು ‘ ಅದ್ಭುತ ‘ ನಡೆ ಎಂದು ವಿಶ್ಲೇಷಿಸಿದ್ದಾರೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಕಚೇರಿಯಲ್ಲಿ “Listening, Learning and Leading” ಎಂಬ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ರಜನೀಕಾಂತ್ ಮಾತನಾಡಿದರು.
ಹಿಂದೂ ಮಹಾಕಾವ್ಯ ಮಹಾಭಾರತದ ಪ್ರಕಾರ, ಕೃಷ್ಣನನ್ನು ವಿಷ್ಣುವಿನ ಅವತಾರ ಮತ್ತು ಅರ್ಜುನನ್ನು ಆತನ ಶಿಷ್ಯ ಎಂದು ಪರಿಗಣಿಸಲಾಗಿದೆ. ಕೃಷ್ಣ ಯುದ್ಧಕಾಲದಲ್ಲಿ ಅರ್ಜುನನಿಗೆ ಬೋಧಿಸುವ ಬೋಧನೆಗಳೇ ಭಗವದ್ಗೀತೆಯಾಗಿದೆ.
ಮೋದಿ ಮತ್ತು ಅಮಿತ್ ಶಾ ದೀರ್ಘಕಾಲದಿಂದಲೂ ಸಹವರ್ತಿಗಳಾಗಿ ಕಾರ್ಯ ಮಾಡುತ್ತಿದ್ದು, ಇವರಿಬ್ಬರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಹೆಸರುವಾಸಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.