ಇಂಫಾಲ: ರೋಹಿಂಗ್ಯಾ ವಲಸಿಗರನ್ನು ರಾಜ್ಯಕ್ಕೆ ಅಕ್ರಮವಾಗಿ ಸಾಗಿಸಲು ಸಹಾಯ ಮಾಡುತ್ತಿರುವ ವ್ಯಕ್ತಿಗಳನ್ನು ಗುರುತಿಸುವಂತೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ತಮ್ಮ ರಾಜ್ಯದ ನಾಗರಿಕರಿಗೆ ಕರೆ ನೀಡಿದ್ದಾರೆ.
ಆಗಸ್ಟ್ 13 ರಂದು ದೇಶಭಕ್ತರ ದಿನಾಚರಣೆಯನ್ನು ನಡೆಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಬಿರೆನ್, ರೊಹಿಂಗ್ಯಾಗಳ ಅಕ್ರಮ ಒಳನುಸುಳುವಿಕೆಯನ್ನು ಉತ್ತೇಜಿಸುತ್ತಿರುವವರನ್ನು ಪತ್ತೆಮಾಡಲು ನಾಗರಿಕರ ಸಹಾಯವನ್ನು ಯಾಚಿಸಿದ್ದಾರೆ.
ರಾಜ್ಯ ರಾಜಧಾನಿ ಇಂಫಾಲದ ತುಲಿಹಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಆರು ರೋಹಿಂಗ್ಯಾಗಳನ್ನು ಬಂಧಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ನವದೆಹಲಿಯಿಂದ ವಿಮಾನ ಹಿಡಿದಿರುವ ವ್ಯಕ್ತಿಗಳು ನಕಲಿ ದಾಖಲೆಗಳೊಂದಿಗೆ ಮಣಿಪುರ ಪ್ರವೇಶಿಸಿದ್ದಾರೆ ಎಂದು ಹೇಳಿದ್ದಾರೆ.
“ಹಲವಾರು ರೊಹಿಂಗ್ಯಾಗಳು ರಾಜ್ಯದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ವಿವಿಧ ಸ್ಥಳಗಳಿಂದ ರೋಹಿಂಗ್ಯಾಗಳ ಅಕ್ರಮ ಪ್ರವೇಶದ ಹಿಂದೆ ಇರುವ ವ್ಯಕ್ತಿಗಳನ್ನು ನಾವು ಕಂಡುಹಿಡಿಯಬೇಕಾಗಿದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ
ಅಕ್ರಮ ರೋಹಿಂಗ್ಯಾಗಳು ಮತ್ತು ಅವರ ಏಜೆಂಟರನ್ನು ಪತ್ತೆಹಚ್ಚಲು ಸಹಾಯ ಮಾಡುವಂತೆ ಅವರು ಸ್ಥಳೀಯ ಮಣಿಪುರಿಗಳಿಗೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.