ನವದೆಹಲಿ: ಕರ್ನಾಟಕ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಭರವಸೆ ನೀಡಿದ್ದಾರೆ.
“ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಲಿದೆ ಮತ್ತು ರಾಜ್ಯದಾದ್ಯಂತ ಭಾರಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಕೇಂದ್ರ ತಂಡವನ್ನು ಕಳುಹಿಸಿಕೊಡಲಿದೆ ಎಂದು ಮೋದಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಭರವಸೆಯನ್ನು ನೀಡಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ತಮ್ಮ ನಿಯೋಗದೊಂದಿಗೆ ಶುಕ್ರವಾರ ಮೋದಿಯವರನ್ನು ರಾಷ್ಟ್ರ ರಾಜಧಾನಿಯಲ್ಲಿನ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ, ನೆರೆಯ ಬಗ್ಗೆ ವಿವರಗಳನ್ನು ನೀಡಿದ್ದಾರೆ ಮತ್ತು ನೆರವು ನೀಡುವಂತೆ ಕೋರಿದ್ದಾರೆ.
ಕರ್ನಾಟಕದಲ್ಲಿ ಸಂಭವಿಸಿದ ಪ್ರವಾಹವು 40 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಒಟ್ಟು 14 ಜನರು ಕಾಣೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ಭಾರೀ ಮುಂಗಾರು ಮಳೆಯಿಂದಾಗಿ ರಾಜ್ಯದ ಅನೇಕ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿತ್ತು, ಈ ಹಿನ್ನಲೆಯಲ್ಲಿ 5.81 ಲಕ್ಷ ಜನರನ್ನು ಸ್ಥಳಾಂತರಗೊಳಿಸಲಾಗಿತ್ತು.
ಪ್ರಸ್ತುತ ಕೂಡ ಅನೇಕ ಮಂದಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯವನ್ನು ಪಡೆದುಕೊಂಡಿದ್ದಾರೆ. ಮನೆ ಮಠ ಕಳೆದುಕೊಂಡವರಿಗೆ ಮರಳಿ ಬದುಕನ್ನು ಕಟ್ಟಿಕೊಡುವ ಕಾರ್ಯದಲ್ಲಿ ಸರ್ಕಾರ ನರೆವಾಗಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.