ನವದೆಹಲಿ: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ‘ಜಲ್ ಜೀವನ್ ಮಿಶನ್’ ಅನ್ನು ಆರಂಭಿಸಿದ್ದಾರೆ. ಇದಕ್ಕಾಗಿ 3.5 ಲಕ್ಷ ಕೋಟಿ ರೂ.ಗಳ ವಿನಿಯೋಗವನ್ನು ಮಾಡಲು ನಿರ್ಧರಿಸಿದ್ದಾರೆ.
2024 ರ ವೇಳೆಗೆ ಅಂದರೆ ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಪೈಪ್ಡ್ ನೀರು ಸರಬರಾಜು ಮಾಡುವ ಉದ್ದೇಶವನ್ನು ಈ ಮಿಷನ್ ಹೊಂದಿದೆ. ಹೊಸದಾಗಿ ರಚಿಸಲಾದ ಜಲ ಶಕ್ತಿ ಸಚಿವಾಲಯವು ಈ ಯೋಜನೆಯನ್ನು ಮುನ್ನಡೆಸಲಿದೆ.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಈ ಮಿಷನ್ ಸ್ಥಳೀಯ ಮಟ್ಟದಲ್ಲಿ ಸಮಗ್ರ ನೀರಿನ ಬೇಡಿಕೆ ಮತ್ತು ನೀರಿನ ಸರಬರಾಜು ನಿರ್ವಹಣೆಯ ಮೇಲೆ ಕೇಂದ್ರೀತವಾಗಲಿದೆ. ಮಳೆನೀರು ಕೊಯ್ಲು, ಅಂತರ್ಜಲ ಪುನರ್ಭರ್ತಿ ಮತ್ತು ಕೃಷಿಯಲ್ಲಿ ಮರುಬಳಕೆಗಾಗಿ ಮನೆಯ ತ್ಯಾಜ್ಯನೀರಿನ ನಿರ್ವಹಣೆ ಮುಂತಾದ ಮೂಲ ಸುಸ್ಥಿರತೆಗಾಗಿ ಸ್ಥಳೀಯ ಮೂಲಸೌಕರ್ಯಗಳನ್ನು ರಚಿಸುವುದು ಸೇರಿದಂತೆ ಅನೇಕ ಕಾರ್ಯಗಳನ್ನು ಈ ಮಿಷನ್ ನಡೆಸಲಿದೆ.
ದೇಶಾದ್ಯಂತ ಸುಸ್ಥಿರ ನೀರು ಸರಬರಾಜು ನಿರ್ವಹಣೆಯ ಉದ್ದೇಶಗಳನ್ನು ಸಾಧಿಸಲು ಕೇಂದ್ರವು ಇತರ ರಾಜ್ಯ ಸರ್ಕಾರದ ಯೋಜನೆಗಳೊಂದಿಗೆ ಕೈಜೋಡಿಸಲಿದೆ.
ನೀತಿ ಆಯೋಗದ ವರದಿಯು, ಭಾರತದಲ್ಲಿ ಮುಂಬರುವ ದಿನಗಳಲ್ಲಿ ಭಾರಿ ನೀರಿನ ಬಿಕ್ಕಟ್ಟನ್ನು ಉದ್ಭವಿಸಲಿದೆ ಎಂಬ ಎಚ್ಚರಿಕೆಯನ್ನು ನೀಡಿದೆ. ಈ ನಿಟ್ಟಿನಲ್ಲಿ ಜಲ ಜೀವನ್ ಮಿಷನ್ ಭಾರೀ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. 600 ಮಿಲಿಯನ್ ಭಾರತೀಯರು ಈಗಾಗಲೇ ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಮತ್ತು 2050 ರ ವೇಳೆಗೆ ಒಟ್ಟು ದೇಶೀಯ ಉತ್ಪನ್ನದಲ್ಲಿ ಶೇಕಡಾ 6 ರಷ್ಟು ನೀರಿನ ಅಭಾವದಿಂದ ನಷ್ಟವಾಗಬಹುದು ಎಂದು ಆಯೋಗ ಎಚ್ಚರಿಕೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.