ಲಕ್ನೋ: ಶಿಕ್ಷಣ ವ್ಯವಸ್ಥೆಯನ್ನು ಉತ್ತೇಜಿಸುವ ಸಲುವಾಗಿ ಉತ್ತರ ಪ್ರದೇಶವು ತನ್ನ ರಾಜ್ಯದ ಎಲ್ಲಾ 18 ವಿಭಾಗಗಳಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ಘೋಷಿಸಿದ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಸತಿ ಶಾಲೆ ಯೋಜನೆಯನ್ನೂ ಘೋಷಣೆ ಮಾಡಿದ್ದಾರೆ.
ವಾಜಪೇಯಿ ಅವರ ಮೂಲ ಊರು ಆಗ್ರಾದ ಬಟೇಶ್ವರ್ನಲ್ಲಿ ಅವರ ಸ್ಮಾರಕವನ್ನೂ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಇನ್ನೂ ಹಲವಾರು ಯೋಜನೆಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಯೋಗಿ, ಡಿಸೆಂಬರ್ 25 ರಂದು ವಾಜಪೇಯಿ ಅವರ ಜನ್ಮದಿನದಂದು ಸೆಕ್ರೆಟರಿಯಟ್ ಲೋಕ್ ಭವನದಲ್ಲಿ 25 ಅಡಿ ಎತ್ತರದ ವಾಜಪೇಯಿ ಅವರ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು. ವಾಜಪೇಯಿ ಅವರು ಶಿಕ್ಷಣವನ್ನು ಪಡೆದ ಕಾನ್ಪುರದ ಡಿಎವಿ ಕಾಲೇಜಿನಲ್ಲಿ ‘ಸೆಂಟರ್ ಎಕ್ಸಲೆನ್ಸ್’ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.
ಲಕ್ನೋದಲ್ಲಿ ವೈದ್ಯಕೀಯ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಮತ್ತು ಬಾಲ್ರಾಂಪುರದಲ್ಲಿ ಕೆಜಿಎಂಯು ಉಪಗ್ರಹ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಇಲ್ಲಿಂದ ವಾಜಪೇಯಿ ಅವರು 1957 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎಂದು ಸಿಎಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.