ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ಭೇಟಿಯಾಗಿ ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚೆಯನ್ನು ನಡೆಸಿದರು. 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಅಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿತ್ತು. ಪ್ರಸ್ತುತ ನಿರ್ಬಂಧಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ.
ಇಂದು, ಶ್ರೀನಗರದಲ್ಲಿ ಶಾಲೆ ಮತ್ತು ಸರ್ಕಾರಿ ಕಛೇರಿಗಳನ್ನು ತೆರೆಯಲಾಗಿದೆ. ಅರ್ಧದಷ್ಟು ಲ್ಯಾಂಡ್ಲೈನ್ ಫೋನ್ಗಳನ್ನು ಪುನರಾರಂಭಿಸಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆಯನ್ನೂ ಹಂತಹಂತವಾಗಿ ಆರಂಭಿಸಲಾಗುತ್ತಿದೆ.
370ನೇ ವಿಧಿ ರದ್ದುಗೊಂಡಂದಿನಿಂದಲೇ ಕಾಶ್ಮೀರದಲ್ಲಿ ತಂಗಿದ್ದ ಅಜಿತ್ ದೋವಲ್ ಅವರು, ಅಲ್ಲಿನ ಭದ್ರತಾ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ಪರಿಶೀಲನೆಗೊಳಪಡಿಸುತ್ತಿದ್ದರು. ಮಾತ್ರವಲ್ಲದೇ, ಅಲ್ಲಿನ ಜನರೊಂದಿಗೆ ನಿರಂತರವಾದ ಮಾತುಕತೆಯನ್ನು ನಡೆಸುತ್ತಿದ್ದರು. ಪ್ರಸ್ತುತ ಅವರು ದೆಹಲಿಗೆ ಮರಳಿದ್ದಾರೆ.
ಅಮಿತ್ ಶಾ ಮತ್ತು ದೋವಲ್ ಇಂದು ಸಭೆ ನಡೆಸಿದ್ದು ಕಾಶ್ಮೀರದ ಭದ್ರತಾ ವ್ಯವಸ್ಥೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.