ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿ (ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್)ಯ ಅಂತಿಮ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ್ದಾರೆ. ಆಗಸ್ಟ್ 31 ಕ್ಕೆ ಅಂತಿಮ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಪರಿಶೀಲನಾ ಸಭೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ, ಅಸ್ಸಾಂನ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು.
ಅಂತಿಮ ಎನ್ಆರ್ಸಿ ಪಟ್ಟಿಯಲ್ಲಿ ಹೆಸರುಗಳಿಲ್ಲದವರಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಬೇಕು ಎಂಬುದು ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರ. ಅಂತಹ ಜನರಿಗೆ ಸರ್ಕಾರಿ ಅಧಿಕಾರಿಗಳಿಂದ ಸಾಧ್ಯವಿರುವ ಎಲ್ಲ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತದೆ.
ಅಂತಿಮ ಎನ್ಆರ್ಸಿಯಲ್ಲಿ ಹೆಸರಿಲ್ಲದ ಭಾರತೀಯ ನಾಗರಿಕರು ವಿದೇಶಿ ನ್ಯಾಯಮಂಡಳಿಗಳ ಮುಂದೆ ಪ್ರಕರಣವನ್ನು ಪ್ರತಿನಿಧಿಸಬಹುದು ಎಂದು ವರದಿಗಳು ತಿಳಿಸಿವೆ.
ಅಂತಿಮ ಎನ್ಆರ್ಸಿ ಪ್ರಕಟಣೆಗೆ ಆರಂಭಿಕ ಗಡುವು ಜುಲೈ 31 ಆಗಿತ್ತು, ಆದರೆ ಇದನ್ನು ಸುಪ್ರೀಂ ಕೋರ್ಟ್ ಆಗಸ್ಟ್ 31 ರವರೆಗೆ ವಿಸ್ತರಿಸಿತು.
ಗಡುವನ್ನು ವಿಸ್ತರಿಸುವಾಗ, ಎನ್ಆರ್ಸಿ ಕರಡಿನಲ್ಲಿ ಈಗಾಗಲೇ ಹೆಸರು ಇರುವ ಜನರನ್ನು ಪರಿಶೀಲಿಸುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಗಡಿ ಜಿಲ್ಲೆಗಳಲ್ಲಿ ವಾಸಿಸುವ 20% ಜನರನ್ನು ಪರೀಕ್ಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒತ್ತಾಯಿಸಿದ್ದವು. ಲಕ್ಷಾಂತರ ಅಕ್ರಮ ನಿರಾಶ್ರಿತರು, ಸ್ಥಳೀಯ ಎನ್ಆರ್ಸಿ ಅಧಿಕಾರಿಗಳ ಸಹಾಯದೊಂದಿಗೆ, ತಮ್ಮ ಹೆಸರುಗಳನ್ನು ಎನ್ಆರ್ಸಿ ಕರಡಿನಲ್ಲಿ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ಕಳವಳ ವ್ಯಕ್ತಪಡಿಸಿತ್ತು.
ಅಸ್ಸಾಂ ಎನ್ಆರ್ಸಿಗೆ ಸಂಬಂಧಿಸಿದಂತೆ ಆಧಾರ್ ಮಾದರಿಯ ರಹಸ್ಯವನ್ನು ಕಾಪಾಡಿಕೊಳ್ಳಬೇಕೆಂದು ಉನ್ನತ ನ್ಯಾಯಾಲಯವು ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.