ನವದೆಹಲಿ: ಗುಜರಾತ್ ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಕೊಡುಗೆಯನ್ನು ನೀಡಲು ಸಜ್ಜಾಗಿದೆ. ಈ ರಾಜ್ಯದಲ್ಲಿ ಮೊಟ್ಟಮೊದಲ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಸಿಐಸಿಇಟಿ)ಯನ್ನು ಸ್ಥಾಪಿಸಲು ನಿರ್ಧರಿಸಿದೆ. ಇದು ದೇಶದ ಮೊದಲ ಸಿಐಸಿಇಟಿ ಕೂಡ ಆಗಲಿದೆ.
ಸೂರತ್ನಲ್ಲಿ ಅಥವಾ ವತ್ವಾದಲ್ಲಿ ಈ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಶಿಪ್ಪಿಂಗ್ ರಾಜ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ರಾಜ್ಯದ ವಾಪಿ, ಅಂಕಲೇಶ್ವರ ಮತ್ತು ವತ್ವ ಪ್ರದೇಶಗಳಲ್ಲಿ ರಾಸಾಯನಿಕ ಕೈಗಾರಿಕೆಗಳು ಗಮನಾರ್ಹ ಮಟ್ಟದಲ್ಲಿ ಇವೆ.
“ಇನ್ಸ್ಟಿಟ್ಯೂಟ್ ಅನ್ನು ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (CIPET) ಮಾದರಿಯಲ್ಲಿ ನಿರ್ಮಿಸಲಾಗುವುದು. ರಾಸಾಯನಿಕ ಉದ್ಯಮದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಸುಗಮಗೊಳಿಸುವುದು ಇದರ ಹಿಂದಿನ ಉದ್ದೇಶವಾಗಿದೆ” ಎಂದು ಮಾಂಡವಿಯಾ ಹೇಳಿದ್ದಾರೆ.
ಅಹಮದಾಬಾದ್ನಲ್ಲಿ ಕೇಂದ್ರ ಸರ್ಕಾರದ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (CIPET)ನಲ್ಲಿ ಹಾಸ್ಟೆಲ್ ಅನ್ನು ಉದ್ಘಾಟಿಸುವ ವೇಳೆ ಮಾಂಡವೀಯಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ. CIPET ಹಾಸ್ಟೆಲ್ 575 ಬಾಲಕರು ಮತ್ತು 150 ಬಾಲಕಿಯರಿಗೆ ಸ್ಥಳಾವಕಾಶ ನೀಡುವ ಸಾಮರ್ಥ್ಯವನ್ನು ಹೊಂದಿದೆ.
CIPET ರೀತಿಯಲ್ಲೇ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸ್ಥಾಪನೆ ಮಾಡುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.