ನವದೆಹಲಿ: ಪ್ರತಿ ಐದು ಕಿಲೋಮೀಟರ್ಗೆ ಒಂದರಂತೆ ಬ್ಯಾಂಕ್ ಶಾಖೆಗಳು ಇರಬೇಕು ಮತ್ತು ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗ್ರಾಮಗಳು ಮೊಬೈಲ್ ದೂರವಾಣಿ ಸಂಪರ್ಕವನ್ನು ಹೊಂದಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಪಶ್ಚಿಮ ವಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನವನ್ನು ನೀಡಿದ್ದಾರೆ.
ಗೋವಾದಲ್ಲಿ ನಡೆದ ಪಶ್ಚಿಮ ವಲಯ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ವೇಳೆ ಶಾ ಅವರು ಈ ನಿರ್ದೇಶನಗಳನ್ನು ನೀಡಿದ್ದಾರೆ.
ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬ್ಯಾಂಕುಗಳಿಗೆ ಮತ್ತು ಟೆಲಿಕಾಂ ಕಂಪೆನಿಗಳಿಗೆ ಈ ವಲಯದಲ್ಲಿನ ಹಳ್ಳಿಗಳಲ್ಲಿ ಶಾಖೆಗಳನ್ನು ತೆರೆಯುವುದು ಮತ್ತು ದೂರವಾಣಿ ಸಂಪರ್ಕವನ್ನು ಒದಗಿಸುವುದನ್ನು ಕಡ್ಡಾಯಪಡಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆಯನ್ನು ನೀಡಿದ್ದಾರೆ.
“ಈ ಮೊದಲು, ಪ್ರತಿ ಹಳ್ಳಿಯಲ್ಲಿ 10 ಕಿಲೋಮೀಟರ್ ಒಳಗೆ ಒಂದು ಶಾಖೆ ಇರಬೇಕೆಂದು ನಿರ್ದೇಶನ ನೀಡಲಾಗಿತ್ತು. ಇದೀಗ ಆ ದೂರವನ್ನು ಐದು ಕಿಲೋಮೀಟರ್ಗೆ ಇಳಿಸುವಂತೆ ಶಾ ಅವರು ನಿರ್ದೇಶನವನ್ನು ನೀಡಿದ್ದಾರೆ ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗುಜರಾತ್, ಮಹಾರಾಷ್ಟ್ರ, ಗೋವಾದ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಡಾಮನ್, ಡಿಯು ಮತ್ತು ದಾದ್ರಾ ಮತ್ತು ನಗರ ಹವೇಲಿ ವಲಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಭದ್ರತೆಗೆ ಸಂಬಂಧಿಸಿದ ವಿಷಯಗಳು, ಬಡವರಿಗಾಗಿನ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಸಮಸ್ಯೆಗಳು ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಚರ್ಚಿಸಲ್ಪಟ್ಟವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.