ನವದೆಹಲಿ: ಜಮ್ಮು ಕಾಶ್ಮೀರದ ಬಗೆಗಿನ ಹೇಳಿಕೆಯ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧೀ ಅವರು ದೇಶವನ್ನು ನಾಚಿಗೆಪಡುವಂತೆ ಮಾಡಿದ್ದಾರೆ, ಅವರ ಹೇಳಿಕೆಗಳನ್ನು ಆಧರಿಸಿ ಪಾಕಿಸ್ಥಾನ ವಿಶ್ವಸಂಸ್ಥೆಗೆ ವರದಿಗಳನ್ನು ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಅಲ್ಲಿ ಪಾಕಿಸ್ಥಾನ ಹಿಂಸಾಚಾರವನ್ನು ನಡೆಸುತ್ತಿದೆ ಎಂದು ಇಂದು ಬೆಳಿಗ್ಗೆ ರಾಹುಲ್ ನೀಡಿರುವ ಹೇಳಿಕೆಯ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, ತಮ್ಮ ಧೋರಣೆಗೆ ರಾಹುಲ್ ಕ್ಷಮಾಪಣೆ ಕೇಳಬೇಕು ಎಂದಿದ್ದಾರೆ.
“ರಾಹುಲ್ ಗಾಂಧಿ ಇಂದು ಕಾಶ್ಮೀರವು ಆಂತರಿಕ ವಿಷಯವಾಗಿದೆ ಮತ್ತು ಅಲ್ಲಿ ನಡೆಯುವ ಹಿಂಸಾಚಾರಕ್ಕೆ ಪಾಕಿಸ್ಥಾನದ ಸಂಬಂಧ ಇದೆ ಎಂದಿದ್ದಾರೆ. ಈ ವಿಷಯದಲ್ಲಿ ಅವರು ಸಂಪೂರ್ಣ ಯು-ಟರ್ನ್ ಹೊಡೆದಿರುವುದು ಯಾಕೆ? ರಾಷ್ಟ್ರವು ಅವರ ವಿರುದ್ಧ ಕೋಪಗೊಂಡಿದ್ದರಿಂದಲೇ?” ಎಂದು ಜಾವ್ಡೇಕರ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೂ ಸರಿಯಾಗಿಲ್ಲ, ಅಲ್ಲಿ ಜನರು ಸಾಯುತ್ತಿದ್ದಾರೆ ಎಂದು ವರದಿಗಳು ಹೇಳುತ್ತಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಿಮ್ಮ ಅನಿಸಿಕೆ ತಪ್ಪು ರಾಹುಲ್ ಅವರೇ, ಜಮ್ಮು ಕಾಶ್ಮೀರದಲ್ಲಿ ಎಲ್ಲವೂ ಸರಿಯಾಗಿದೆ. ನೀವು ಊಹಿಸಿದಂತೆ ಯಾವುದೇ ಹಿಂಸಾಚಾರಗಳು ಸಂಭವಿಸಿಲ್ಲ. ಜನರು ಸಾಯುತ್ತಿಲ್ಲ. ಪಾಕಿಸ್ಥಾನ ನಿಮ್ಮ ಹೇಳಿಕೆಗಳನ್ನು ಬಳಸಿಕೊಂಡಿದೆ. ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನ ಸಲ್ಲಿಸಿರುವ ಅರ್ಜಿಯಲ್ಲಿ ರಾಹುಲ್ ಗಾಂಧಿ ಮಾಡಿದ ಟೀಕೆಗಳನ್ನು ಉಲ್ಲೇಖಿಸಲಾಗಿದೆ” ಎಂದು ಜಾವ್ಡೇಕರ್ ಹೇಳಿದ್ದಾರೆ.
ಕಾಶ್ಮೀರದ ಬಗ್ಗೆ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ದೇಶದ ಘನತೆಯೊಂದಿಗೆ ಆಟವಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ಭಾರತ ಸರ್ಕಾರದ ಕ್ರಮವನ್ನು ವಿರೋಧಿಸಿ ಮಾತನಾಡುವ ಮೂಲಕ ಕಾಂಗ್ರೆಸ್ ನಾಯಕ ಪಾಕಿಸ್ಥಾನಕ್ಕೆ ಸಹಾಯ ಮಾಡುತ್ತಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.