ವಾಷಿಂಗ್ಟನ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಅವರ ನಡುವೆ ಗುರುವಾರ ದೂರವಾಣಿ ಮೂಲಕ ಮಾತುಕತೆ ನಡೆದಿದೆ. ಮಾತುಕತೆಯ ವೇಳೆ ಉಭಯ ದೇಶಗಳು ಮತ್ತಷ್ಟು ನಿಕಟವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಭವಿಷ್ಯದ ಹೆಜ್ಜೆಗಳ ಬಗ್ಗೆ ಚರ್ಚೆಯನ್ನು ನಡೆಸಿರುವುದಾಗಿ ಎಸ್ಪರ ಹೇಳಿದ್ದಾರೆ.
ಕಳೆದ ತಿಂಗಳು ಅಮೆರಿಕಾದ ರಕ್ಷಣಾ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಎಸ್ಪರ್ ಅವರು ಸಿಂಗ್ ಅವರೊಂದಿಗೆ ದೂರವಾಣಿಯಲ್ಲಿ ಮೊದಲ ಬಾರಿಗೆ ಸಂಭಾಷಣೆಯನ್ನು ನಡೆಸಿದರು. “ನಾವು ತುಂಬಾ ಆತ್ಮೀಯ ಸಂಭಾಷಣೆ ನಡೆಸಿದ್ದೇವೆ. ನಮ್ಮ ಪರಸ್ಪರ ಕಾರ್ಯತಂತ್ರದ ಆಸಕ್ತಿಯ ಬಗ್ಗೆ ನಾವು ಮಾತನಾಡಿದ್ದೇವೆ ಮತ್ತು ನಿಕಟವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದೇವೆ ” ಎಂದು ಎಸ್ಪರ್ ಪೆಂಟಗಾನ್ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಎಸ್ಪರ್ ಅವರು ಗಡಿಯಾಚೆಗಿನ ಭಯೋತ್ಪಾದನೆಯ ವಿಷಯವನ್ನು ಎತ್ತಿದ್ದರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಭಾರತ ನಡೆಸುತ್ತಿರುವ ಪ್ರಯತ್ನಗಳನ್ನೂ ಶ್ಲಾಘಿಸಿದರು ಎಂದು ವಕ್ತಾರರು ಹೇಳಿದ್ದಾರೆ. ಅಲ್ಲದೇ, ಅವರು ಜಮ್ಮು ಕಾಶ್ಮೀರ ಭಾರತ ಆಂತರಿಕ ವಿಷಯ ಎಂಬ ಭಾರತದ ನಿಲುವನ್ನೂ ಬೆಂಬಲಿಸಿದ್ದಾರೆ ಎಂದು ಹೇಳಲಾಗಿದೆ.
“ಅವರು ಮಿಲಿಟರಿಯಿಂದ ಮಿಲಿಟರಿ ಸಹಕಾರ, ರಕ್ಷಣಾ ನೀತಿ, ಸಂಶೋಧನೆ ಮತ್ತು ಅಭಿವೃದ್ಧಿ, ರಕ್ಷಣಾ ವ್ಯಾಪಾರ, ತಂತ್ರಜ್ಞಾನ ಮತ್ತು ಕೈಗಾರಿಕಾ ಸಹಕಾರಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು” ಎಂದು ಅಧಿಕಾರಿಗಳು ಹೇಳಿದ್ದಾರೆ.
2 + 2′ ಭಾರತ-ಯುಎಸ್ ಸಂವಾದದ ಭಾಗವಾಗಿ ಈ ವರ್ಷದ ಕೊನೆಯಲ್ಲಿ ಉಭಯ ನಾಯಕರು ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾಗುವ ಸಾಧ್ಯತೆ ಇದೆ. ಕಾರ್ಯತಂತ್ರದ ಮಾತುಕತೆಗಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಕೂಡ ಈ ವೇಳೆ ಸಭೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.